ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳೇ ನಮ್ಮೆಲ್ಲರಿಗೂ ಮಾರ್ಗದರ್ಶಕ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂ.ಗ್ರಾ.ಜಿಲ್ಲೆ, (ಜೂ.27): ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

“ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬೆಂಗಳೂರು ಇಂದು ವಿಶ್ವದಲ್ಲೇ ಹೆಸರು ಗಳಿಸಲು ಕೆಂಪೇಗೌಡರ ಕಾರ್ಯವೈಖರಿ ಎಲ್ಲರಿಗೂ ಮಾದರಿ. ದೇವನಹಳ್ಳಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಒಂದು ಸಂಸ್ಥೆ ನಿರ್ಮಿಸಿ ಕೆಂಪೇಗೌಡರ ಇತಿಹಾಸ, ಅಭಿವೃದ್ಧಿ ಕಾರ್ಯಗಳು, ಆದರ್ಶಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಮಾತನಾಡಿ  ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದರು,  ಇಂದು 2 ಕೋಟಿಯಷ್ಟು ಜನ ಬೆಂಗಳೂರಲ್ಲಿ  ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕು ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ದೇವನಹಳ್ಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಹಮ್ಮಿಕೊಳ್ಳಲಾದ ಕೆಂಪೇಗೌಡ ಅವರ ಭಾವಚಿತ್ರ ಹೊತ್ತ ರಥ ಸಂಚಾರಕ್ಕೆ ಹಾಗೂ ಕಲಾತಂಡಗಳ ಮೆರವಣಿಗೆ ನಡೆಯಿತು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!