ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ಜುಲೈ 17ರ ಒಳಗೆ ಅಂತಿಮ ವರದಿ ಸಲ್ಲಿಕೆಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಬೆಂಗಳೂರು, (ಜೂ.27): ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (ಕೆಐಎಡಿಬಿ) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಇತ್ಯಾದಿಗಳ ಬಗ್ಗೆ ತಮಗೆ ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಅವರು ಮಂಗಳವಾರ ಇಲ್ಲಿ ಸುದೀರ್ಘ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 762 ಪ್ರಕರಣಗಳಲ್ಲಿ ಸರಕಾರದ ಪರ ಆದೇಶ ಬಂದಿದೆ. ಆದರೆ, ಸರಕಾರದ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್‌ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು” ಎಂದರು.

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದು ಈಗ ಕಗ್ಗಂಟಾಗಿದೆ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ” ಎಂದು ಅವರು ನಿರ್ದೇಶಿಸಿದರು.

ಕೈಗಾರಿಕೆಗಳ ಬಳಕೆಗೆಂದು ಸರಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಇದ್ದು, ಇದರ ಮೌಲ್ಯ 8ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದರಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಜತೆಗೆ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿ ಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಅಗತ್ಯ ಆಧಾರಿತ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಇಲ್ಲದೆ ಹೋದರೆ ಎಲ್ಲವೂ ಬರೀ ಭೂಸ್ವಾಧೀನದ ಹಂತದಲ್ಲೇ ನಿಂತು ಹೋಗುತ್ತದೆ. ನಮ್ಮಲ್ಲಿ ಕೈಗಾರಿಕಾ ಉದ್ದೇಶಕ್ಕೆಂದು ವಶಪಡಿಸಿಕೊಂಡಿರುವ ಜಮೀನು ದಶಕಗಳ ನಂತರವೂ ಹಾಗೆಯೇ ಉಳಿದುಕೊಂಡಿರುವುದಕ್ಕೆ ಇದೇ ಮೂಲಕಾರಣವಾಗಿದೆ ಎಂದು ಪಾಟೀಲ ಪ್ರತಿಪಾದಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಆಯುಕ್ತ ಮಹೇಶ್‌ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!