ಅಕ್ಕಿ ಲಭ್ಯವಾಗುವವರೆಗೂ 5 ಕೆಜಿ ಅಕ್ಕಿಯ ಮೊತ್ತವನ್ನು ಡಿಬಿಟಿ ಮೂಲಕ ನೀಡಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ.28): ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆಜಿ ಆಹಾರಧಾನ್ಯವನ್ನು  ಜುಲೈ1 ರಿಂದ  ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ   ಪ್ರತಿ ಕೆಜಿ ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು  ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯಕ್ಕೆ ಅಕ್ಕಿ ದಾಸ್ತಾನು ದೊರೆತ ತಕ್ಷಣದಿಂದ ಹಣದ ಬದಲು ಅಕ್ಕಿಯನ್ನು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ವಿತರಿಸಲಾಗುವುದು. ರಾಜ್ಯದ ಜನರಿಗೆ ನಮ್ಮ ಸರ್ಕಾರ ನೀಡಿರುವ ಗ್ಯಾರೆಂಟಿಯಿಂದ ಹಿಂದೆ ಸರಿಯಬಾರದೆಂಬ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು.

ಬಡವರಿಗೆ ಅಕ್ಕಿ ಕೊಡುವ ವಿಷಯದಲ್ಲಿ ರಾಜ್ಯದಲ್ಲಿರುವ ಬಿಜೆಪಿಯವರು ಕೇಂದ್ರದೊಂದಿಗೆ ಮಾತನಾಡಿ ಅಕ್ಕಿ ಕೊಡಿಸಬೇಕಿತ್ತು. ನಾನು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಹಾಗೂ ರಾಜ್ಯ ಆಹಾರ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ, ಅಕ್ಕಿ ಸರಬರಾಜು ಮಾಡಲು ಮನವಿ ಮಾಡಲಾಯಿತು. ಎನ್ ಸಿ ಸಿಎಫ್, ನಫೆಡ್, ಕೇಂದ್ರೀಯ ಭಂಡಾರ,ಈ ಮೂರು ಸಂಸ್ಥೆಗಳು ಅಕ್ಕಿ ಪೂರೈಸಲು  ಸೂಚಿಸಿರುವ ದರ ಹೆಚ್ಚಾಗಿದೆ. ಎನ್ ಸಿ ಸಿ ಎಫ್ ನವರು 32.94 ಪೈಸೆ ಸೂಚಿಸಿದ್ದು, ನಾವು 32.24 ರೂ.ಗಳಿಗೆ ನೀಡಬೇಕೆಂದು ಕೋರಿದ್ದೇವೆ.  ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಪಾರದರ್ಶಕವಾಗಿ ಟೆಂಡರ್  ಕರೆಯಲಾಗುತ್ತಿದೆ ಎಂದು ತಿಳಿಸಿದರು.

ಜುಲೈ 1 ರಿಂದ ಅಕ್ಕಿ ನೀಡಲಾಗುವುದು ಎಂಬ ಭರವಸೆ ನೀಡಲಾಗಿದೆ. ರಾಜ್ಯಕ್ಕೆ ಪ್ರತಿ ತಿಂಗಳು 2,29,000 ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದ್ದು, ಇಷ್ಟು ಪ್ರಮಾಣದ ಅಕ್ಕಿಯನ್ನು ಯಾವ ರಾಜ್ಯದವರೂ ಪೂರೈಸಲು ಸಾಧ್ಯವಿಲ್ಲ. ಯುಪಿಎ ಸರ್ಕಾರ ರಚಿಸಿದ ಆಹಾರ ಭದ್ರತೆ ಕಾಯ್ದೆಯ ಪ್ರಕಾರ ಹಿಂದೆ ನಮ್ಮ ಸರ್ಕಾರ ಜನರಿಗೆ  7 ಕೆಜಿವರೆಗೆ ಅಕ್ಕಿ ಪೂರೈಸಲಾಗುತ್ತಿತ್ತು. ಈಗ ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್ ರಾಜ್ಯಗಳಲ್ಲಿಯೂ ಅಕ್ಕಿಯ ದರ ಹೆಚ್ಚಾಗಿದೆ ಎಂದರು.

ಬಿಜೆಪಿ ಸವಾಲನ್ನು ಸರಿಗಟ್ಟಿದ ಸಿಎಂ: ರಾಜ್ಯ ಸರ್ಕಾರ ಬಡವರು ಮತ್ತು ಮಧ್ಯಮ ವರ್ಗದವರಿಗೆ ಅಕ್ಕಿ ಕೊಡಲು ಶ್ರಮಿಸುತ್ತಿದ್ದಾಗ ಬಿಜೆಪಿಯು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವನ್ನು ಆಡಿಕೊಂಡಿತ್ತು. ಅಕ್ಕಿ ಕೊಡಲು ಸಾಧ್ಯವಾಗದಿದ್ದರೆ ಅಕ್ಕಿ ಮೊತ್ತದ ಹಣ ಕೊಡಿ ಎನ್ನುವ ಸವಾಲನ್ನು ಸರ್ಕಾರದ ಮುಂದೆ ಇಟ್ಟಿತ್ತು. ಈ ಸವಾಲನ್ನು ಸರಿಗಟ್ಟಿದ  ಸರ್ಕಾರ ಅಕ್ಕಿ ಬದಲಿಗೆ ಅಕ್ಕಿ ಮೊತ್ತದ ಹಣವನ್ನು ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗೆ ಹಾಕುವ ನಿರ್ಧಾರ ತೆಗೆದುಕೊಂಡು ಬಿಜೆಪಿಯ ಬತ್ತಳಿಕೆಯನ್ನು ಬರಿದು ಮಾಡಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]