ಮೈಸೂರು, (ಜೂ.28): ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪಕ್ಷದ ಕಚೇರಿಯಲ್ಲಿ ಮಂಗಳವಾರ ಸನ್ಮಾನಿಸಲಾಯಿತು.
ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ‘ಗ್ರಾಮ ಒನ್ ಕೇಂದ್ರಗಳಲ್ಲಿ ಬಿಜೆಪಿಯವರೇ ತುಂಬಿದ್ದಾರೆ. ಗ್ಯಾರಂಟಿ ಯೋಜನೆಯ ನೋಂದಣಿಗಾಗಿ ತೆರಳುವಾಗ ಅವರು ತಪ್ಪು ಮಾಹಿತಿ ನೀಡಿದ ಘಟನೆಗಳೂ ನಡೆದಿವೆ. ಹೀಗಾಗಿ ಕಾರ್ಯಕರ್ತರು ಸಾರ್ವಜನಿಕರಿಗೆ ಉಚಿತ ನೋಂದಣಿ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಪಕ್ಷ ಕಟ್ಟುವ ಪರ್ವ ಕಾಲದಲ್ಲಿ ನಾವಿದ್ದೇವೆ’ ಎಂದು ತಿಳಿಸಿದರು.
‘108 ಆಂಬುಲೆನ್ಸ್ ಹಳೆಯ ಪದ್ಧತಿಯಲ್ಲೇ ಮುಂದುವರೆಯುತ್ತಿದೆ. ಮುಂದಿನ 3 ತಿಂಗಳಲ್ಲಿ ಹೊಸ ವ್ಯವಸ್ಥೆ ಜಾರಿ ಮಾಡುತ್ತೇವೆ. ಅಧಿಕಾರಿಗಳ ವರ್ಗಾವಣೆ ಬಗ್ಗೆಯೂ ಕಾರ್ಯಕರ್ತರಿಂದ ಬೇಡಿಕೆ ಇದೆ. ಸಾಧ್ಯವಾದ ಕಡೆ ಅದನ್ನೂ ಮಾಡುತ್ತೇನೆ’ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….