ಬೆಂಗಳೂರು, (ಜೂ.28): ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರ ತಾಯಿ ನರಸಮ್ಮ ( 94 ವರ್ಷ) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಮೃತ ನರಸಮ್ಮನವರು 09 ಮಕ್ಕಳ ತುಂಬು ಕುಟುಂಬವನ್ನು ಅಗಲಿದ್ದು, ಗುರುವಾರ ಬೆಳಗ್ಗೆ 11:30ರ ವರೆಗೆ ಲಗ್ಗೆರೆಯ ನಿವಾಸದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಬಳಿಕ ಲಗ್ಗೆರೆ ನಾರಾಯಣಸ್ವಾಮಿ ಅವರ ಹುಟ್ಟೂರಾದ ಬೆಂಗಳೂರು ಉತ್ತರ ತಾಲೂಕು ಜಾಲ ಹೋಬಳಿಯ ಬಂಡಿಕೊಡಿಗೇನಹಳ್ಳಿಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು. ಸಂಜೆ 4 ರಿಂದ 6 ಗಂಟೆಗೆ ಅಂತಿಮ ವಿಧಿವಿಧಾನಗಳು ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….