ದೊಡ್ಡಬಳ್ಳಾಪುರ, (ಜೂ.29): ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಸಂಪ್ರದಾಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಶಾಂತಿ ನಗರದ ಈದ್ಗಾ ಮೈದಾನ ಹಾಗೂ ತೂಬಗೆರೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. ಮುಸ್ಲಿಂ ಗುರುಗಳಿಂದ ಧಾರ್ಮಿಕ ಪ್ರವಚನ ನೀಡಿ ದಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.
ತಾಲೂಕಿನ ಮುತ್ತೂರು ಪಾಲನಜೋಗಿಹಳ್ಳಿ ದೊಡ್ಡಬೆಳವಂಗಲ,ಚಿಕ್ಕಬೆಳವಂಗಲ ಕನಸವಾಡಿ, ಬಾಶೆಟ್ಟಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲೂ, ಹೋಬಳಿ ಕೇಂದ್ರಗಳಲ್ಲಿರುವ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆದವು.
ನಗರ ಮತ್ತು ಗ್ರಾಮಾಂತರದೆಲ್ಲೆಡೆ ಬಕ್ರೀದ್ ಆಚರಣೆ ಮಾಡಲಾಯಿತು. ಪ್ರಾರ್ಥನೆ ನಂತರ ತಮ್ಮ ಶಕ್ಯಾನುಸಾರ ದಾನಕಾರ್ಯ ಮಾಡಿದರು. ಮುಸ್ಲಿಂ ಬಾಂಧವರು ಪರಸ್ಪರ ಆಲಂಗಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಬಕ್ರೀದ್ ಆಚರಣೆಯಲ್ಲಿ ತಮ್ಮ ಶಕ್ಯಾನುಸಾರ ಮುಸ್ಲಿಂ ಬಾಂಧವರು ದಾನ ಮಾಡಿ ಬಕ್ರೀದ್ ಆಚರಣೆ ಮಾಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….