ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ.29): ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು  ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.

ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು  ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ  ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ, ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.

ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು  ಬೇಡಿಕೆಗಳನ್ನು ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!