ಸಚಿವ ಎಂ ಬಿ ಪಾಟೀಲ ಜತೆ ತೈವಾನ್‌ ಹೂಡಿಕೆದಾರರ ಭೇಟಿ: ಡೀಸೆಲ್ ಬಸ್‌ಗಳಿಗೆ ಇ.ವಿ.ರೂಪ ಕೊಡಲು ತೈವಾನ್ ಒಲವು

ಬೆಂಗಳೂರು, (ಜೂ.30): ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್‌ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಿ, ಮರುಬಳಕೆಗೆ ಅಣಿಗೊಳಿಸಲು ತೈವಾನ್‌ನ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ಸಂಬಂಧ ಸಾರಿಗೆ ಇಲಾಖೆಯ ಜತೆ ಮಾತನಾಡಿ ಸಂಪರ್ಕಸೇತುವಾಗಿ ಕೆಲಸ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಮಾಡುವ ಸಂಬಂಧ ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿರುವ ತೈವಾನ್ ಇಂಡಿಯಾ ಬಿಝಿನೆಸ್‌ ಅಸೋಸಿಯೇಷನ್‌ನ (ಟಿಐಬಿಎ) 50ಕ್ಕೂ ಹೆಚ್ಚು ಹೂಡಿಕೆದಾರರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯದ ಉದ್ಯಮ ವಲಯ, ಕಾರ್ಯ ಪರಿಸರ, ಪ್ರೋತ್ಸಾಹಕ ಕ್ರಮಗಳು ಮತ್ತು ಸೌಲಭ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಸದ್ಯಕ್ಕೆ ನಮ್ಮಲ್ಲಿ ಕೇಂದ್ರ ಸರಕಾರದ ಸಹಯೋಗದೊಂದಿಗೆ ಇ.ವಿ. ಬಸ್ ಗಳನ್ನು ಓಡಿಸುತ್ತಿದ್ದೇವೆ‌. ಆದರೆ ಡೀಸೆಲ್‌ ಬಸ್ ಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸುವ ಕೆಲಸ ಆಗಬೇಕಾಗಿದೆ. ಇದು ಇವತ್ತಿನ ಅಗತ್ಯ ಕೂಡ. ನೀವು ಮುಂದೆ ಬರುವುದಾದರೆ ಸಾರಿಗೆ ಸಂಸ್ಥೆಗಳ ಜತೆ ಸಂಪರ್ಕ ಕಲ್ಪಿಸಲಾಗುವುದು” ಎಂದರು.

ಇದೇ ರೀತಿಯಲ್ಲಿ ತುಮಕೂರು ಮಶೀನ್‌ ಟೂಲ್ಸ್‌ ಪಾರ್ಕ್ (ಟಿಎಂಟಿಪಿ) ಅನ್ನು ಪುನಶ್ಚೇತನಗೊಳಿಸುವ ಮೂಲಕ ಲಾಭದಾಯಕವನ್ನಾಗಿ ಮಾಡಲು ತೀರ್ಮಾನಿಸಲಾಗಿದೆ. ಹಾಗೆಯೇ, ಎಲೆಕ್ಟ್ರಾನಿಕ್ಸ್‌ ಸಿಸ್ಟಂ ವಿನ್ಯಾಸ ಮತ್ತು ತಯಾರಿಕೆ (ಇಎಸ್‌ಡಿಎಂ) ಕಾರ್ಯ ಪರಿಸರವನ್ನು ವ್ಯಾಪಕಗೊಳಿಸುವ ಉದ್ದೇಶದಿಂದ ಮೈಸೂರಿನ ಕೋಚನಹಳ್ಳಿ ಮತ್ತು ಧಾರವಾಡದ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶಗಳಲ್ಲಿ ಇಎಂಸಿ 2.0 ಕ್ಲಸ್ಟರ್‍‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ತೈವಾನ್‌ ಕಂಪನಿಗಳ ಸಹಭಾಗಿತ್ವ ಹೊಂದುವ ಆಸಕ್ತಿ ಇದೆ ಎಂದು ಅವರು ತಿಳಿಸಿದರು. 

ಬೆಂಗಳೂರಿನ ಪೀಣ್ಯ, ಬೊಮ್ಮಸಂದ್ರ ಮತ್ತು ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿರುವ ಉದ್ದಿಮೆಗಳು ಮಶೀನ್‌ ಟೂಲ್‌ ತಯಾರಿಕೆಗೆ ಹೆಸರಾಗಿವೆ. ಜತೆಗೆ ಆಟೋಮೋಟಿವ್‌ ಮತ್ತು ವಾಹನ  ಬಿಡಿಭಾಗಗಳ ತಯಾರಿಕೆಯು ಮುಂಚೂಣಿಗೆ ಬರುತ್ತಿದೆ. ಇವೆಲ್ಲವೂ ತೈವಾನ್ ಮತ್ತು ಕರ್ನಾಟಕದ ಸಹಭಾಗಿತ್ವಕ್ಕೆ ಪ್ರಶಸ್ತವಾಗಿವೆ ಎಂದು ಅವರು ವಿವರಿಸಿದರು.

ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆಯಲ್ಲೂ ರಾಜ್ಯವು ಹೆಜ್ಜೆ ಗುರುತುಗಳನ್ನು ಮೂಡಿಸುತ್ತಿದೆ. ಕರ್ನಾಟಕಲ್ಲಿ ಗ್ರೀನ್‌ ಹೈಡ್ರೋಜನ್‌, ಎಲೆಕ್ಟ್ರಾನಿಕ್ಸ್ ಸಿಸ್ಟಂ ವಿನ್ಯಾಸ ಮತ್ತು ತಯಾರಿಕೆ (ಇಎಸ್‌ಡಿಎಂ), ಏರೋಸ್ಪೇಸ್‌ ವಲಯಗಳು ಗಮನಾರ್ಹವಾಗಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದ್ದೇವೆ. ಇದನ್ನು ತೈವಾನ್‌ ಹೂಡಿಕೆದಾರರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ ಇದ್ದರು. ತೈವಾನ್‌ ನಿಯೋಗದಲ್ಲಿ ಜಾರ್ಜ್ ಎಲಿಯನ್‌, ಚೆನ್ನೈನ ಟಿಇಸಿಸಿ ಡೈರೆಕ್ಟರ್ ಜನರಲ್‌ ರಿಚರ್ಡ್ ಚೆನ್‌ ಮುಂತಾದವರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!