ದೊಡ್ಡಬಳ್ಳಾಪುರ, (ಜುಲೈ.01): ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2023ರ 242 ಮತಗಟ್ಟೆಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಜೂ.23 ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ, ಎಲ್ಲಾ ನಾಡ ಕಚೇರಿಗಳಲ್ಲಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಆಕ್ಷೇಪಣೆಗಳನ್ನು ಜುಲೈ 04 ರ ಒಳಗೆ ತಹಶೀಲ್ದಾರ್ ರವರ ಕಛೇರಿಯ ಚುನಾವಣಾ ಶಾಖೆಗೆ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….