ಬೆಂ.ಗ್ರಾ.ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ: ಕಲುಷಿತ ನೀರಿನಿಂದ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಚಿವರಿಂದ ಪ್ರಸ್ತಾಪ

ಬೆಂ.ಗ್ರಾ.ಜಿಲ್ಲೆ, (ಜು.01): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿಮೂಲಗಳಿಲ್ಲವಾದ್ದರಿಂದ ನೀರಿನ ಸಮಸ್ಯೆ ನೀಗಿಸಲು, ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಜಿಲ್ಲೆಯಲ್ಲಿರುವ ಕೆರೆಗಳ ಅಂಗಳದಲ್ಲಿ ಬೆಳೆದಿರುವ ಮರಗಳನ್ನು ತೆರವುಗೊಳಿಸಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಲ್ಲಾ  ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲೆಯಲ್ಲಿರುವ ಎಲ್ಲಾ ಕೆರೆಗಳ ಅಂಗಳದಲ್ಲಿ ಬೆಳೆದಿರುವ ಜಾಲಿ ಮರಗಳನ್ನು ಹರಾಜು ಪ್ರಕ್ರಿಯೆ ಮೂಲಕ ತೆರವುಗೊಳಿಸಿ, ಅದರಿಂದ ಬರುವ ಆದಾಯವನ್ನು ಸ್ಥಳೀಯ ಸಂಸ್ಥೆಗಳಿಗೆ(ಗ್ರಾಮ ಪಂಚಾಯಿತಿ) ಹಾಗೂ ಸರ್ಕಾರಕ್ಕೆ ಸಂದಾಯ ಮಾಡಿ, ತೆರಿಗೆ ಹೊರತುಪಡಿಸಿ ಸದರಿ ಆದಾಯವನ್ನು ಹೂಳು ತೆಗೆಯುವಿಕೆ, ಸೇರಿದಂತೆ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಲು ಸಣ್ಣ ನೀರಾವರಿ, ಅರಣ್ಯ, ಪಂಚಾಯಿತಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು, ವೈಜ್ಞಾನಿಕವಾಗಿ ರೂಪುರೇಷೆಗಳನ್ನು ಸಿದ್ಧಪಡಿಸಿ, ಯೋಜನಾಬದ್ಧವಾಗಿ ಪ್ರಾಮಾಣಿಕವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯು ಹಸಿರಿನಿಂದ ಕಂಗೊಳಿಸಲು ಶ್ರಮಿಸಬೇಕು ಎಂದು ತಿಳಿಸಿದರು.

ಕೆರೆಗಳಲ್ಲಿ ಮೀನುಮರಿ ಅಭಿವೃದ್ಧಿಪಡಿಸಿ ಬರುವ ಆದಾಯವನ್ನು ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಇನ್ನಿತರ ಸಂಸ್ಥೆಗಳ ಸಿಎಸ್‌ಆರ್ ಅನುದಾನವನ್ನು ಕೆರೆಗಳ ಅಭಿವೃದ್ಧಿಗೆ ಬಳಸುವ ಮೂಲಕ ಸರ್ಕಾರಕ್ಕೆ ಆರ್ಥಿಕ ಹೊರೆಯನ್ನು ತಗ್ಗಿಸಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗ ನೀಡಲಾಗಿದ್ದು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಂಡು ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದರು.

ದೊಡ್ಡಬಳ್ಳಾಪುರದ ನಾಗರಕೆರೆಗೆ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ಹಾಗೂ ದೊಡ್ಡಬಳ್ಳಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಳಚರಂಡಿ ನೀರು ಸೇರಿ ಆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕೆರೆಯನ್ನು  ಸಂರಕ್ಷಿಸಲು ಕಲುಷಿತ ನಿರು ಬರದಂತೆ ತಡೆಯಲು, ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಲು ಯೋಜನೆಯನ್ನು ರೂಪಿಸಿ, ಶೀಘ್ರ ವರದಿ ನೀಡ ಹಾಗೆಯೇ ಕೆರೆಯನ್ನು ನೇರ ಸಂಪರ್ಕಿಸುವ ಒಳಚರಂಡಿ ಪೈಪ್‌ಲೈನ್ ಅನ್ನು ತೆರವುಗೊಳಿಸಿ, ಸಂಸ್ಕರಿಸಿದ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆರೆಗಳಲ್ಲಿಯೇ ವಿಜಯಪುರ ಬಳಿಯ ಭದ್ರನ ಕೆರೆಯು ಹೆಚ್ಚು ವಿಸ್ತಿರ್ಣವುಳ್ಳದ್ದಾಗಿದ್ದು ಸುಮಾರು 2000 ಎಕರೆ ಪ್ರದೇಶದ ವಿಸ್ತೀರ್ಣ ಹೊಂದಿದೆ. ಕಳೆದ ವರ್ಷ ಸುರಿದ ಮಳೆಯಿಂದಾಗಿ ವಿಜಯಪುರ ಕೆರೆಯಿಂದ ಭದ್ರನಕೆರೆಗೆ ಹಾದುಹೋಗುವ ನೀರು, ಸರಿಯಾದ ರಾಜಕಾಲುವೇ ಮಾರ್ಗ ಇಲ್ಲದಿರುವ ಕಾರಣ ರೈತರ ಕೃಷಿ ಜಮೀನುಗಳಿಗೆ ಮನೆಗಳಿಗೆ ನೀರು ನುಗ್ಗಿ ಜನಸಾಮಾನ್ಯರಿಗೆ ತೊಂದರೆಯಾಗಿತ್ತು. ಆದ್ದರಿಂದ ಇದರ ಬಗ್ಗೆ ಶೀಘ್ರವೇ ಗಮನಹರಿಸಬೇಕು. ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ, ಭೂ ಮಾಪನ ಇಲಾಖೆ ಅಧಿಕಾರಿಗಳನ್ನೊಳಗೊಂಡ ನೇತೃತ್ವದ ತಂಡವು ಭೇಟಿ ನೀಡಿ ವರದಿ ನೀಡಿ, ನೀರು ಹರಿದು ಹೋಗುವ ರಾಜಕಾಲುವೆಯನ್ನು  ತೆರವುಗೊಳಿಸಲು ಕ್ರಮ ಕೈಗೊಳ್ಳಿ ಎಂದರು.

ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿಯಾಗಿರುವ ಸ್ಮಶಾನ ಭೂಮಿಯನ್ನು ಸಂಪರ್ಕಿಸುವ ರಸ್ತೆಗಳಿಲ್ಲದಿರುವುದು ಕಂಡುಬಂದಿದೆ. ಆಯಾ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಅವರು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ಸಮಸ್ಯೆಯನ್ನು ಬಗೆಹರಿಸಿ ವರದಿ ನೀಡಿ ಎಂದು ಹೇಳಿದರು.

ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಮೀಕ್ಷೆಗಾಗಿ ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚಿಸಲಾಗುವುದು ಎಂದರಲ್ಲದೆ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ವೆಯರ್‌ಗಳು ಒಂದು ಗ್ರಾಮವನ್ನಾದರೂ ಪೋಡಿ ಮುಕ್ತ ಗ್ರಾಮವನ್ನಾಗಿ ಘೋಷಿಸಲು ಶೀಘ್ರ ಕ್ರಮ ಕೈಗೊಳ್ಳಲು ಕಾರ್ಯಕ್ರಮ ರೂಪಿಸಿ ಎಂದು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು.

ಜಿಲ್ಲೆಯಲ್ಲಿ 8000 ಎಕರೆ ವಿಸ್ತೀರ್ಣದಷ್ಟು ಕೈಗಾರಿಕಾ ಪ್ರದೇಶವಿದ್ದಿ 800 ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ಕೈಗಾರಿಕೆ ವ್ಯಾಪ್ತಿಯನ್ನು ಹೆಚ್ಚಿಸಲು  ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳುವ ಪ್ರಕ್ರಿಯೆಯು ರೈತರಿಗೆ ತೊಂದರೆಯಾಗದಂತೆ ಕೈಗೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್‌ ನೇಗಿ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ನಾಗರಾಜ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್‌ಕುಮಾರ್ ಸುಭಾಷ್ ರಾವ್ ಪಾಟೀಲ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ದೇವನಹಳ್ಳಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!