ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಕನ್ನಡ ಚಿತ್ರರಂಗದ ಬ್ಯುಸಿ ನಟರಲ್ಲಿ ಒಬ್ಬರು. ಸಾಲು ಸಾಲಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರಿಗೆ ಇಂದು 43ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.
ನಮಸ್ಕಾರ, ನಮಸ್ಕಾರ, ನಮಸ್ಕಾರ ಎನ್ನುತ್ತಲೇ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಟೈಮ್ ಕಾರ್ಯಕ್ರಮದ ನಿರೂಪಕರಾಗಿ ಕನ್ನಡಿಗರ ಮನೆ ಮಾತಾದರು. ಕಾಮಿಡಿ ಟೈಮ್ ಗಣೇಶ್ ಎಂದೇ ಪ್ರಸಿದದ್ರಾದ ಇವರು, ನಂತರ ಚೆಲ್ಲಾಟ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದರು. ನಂತರ ತೆರೆಕಂಡ ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಚಿತ್ರ ಗಣೇಶ್ ಅವರ ಜೀವನವನ್ನೇ ಬದಲಿಸಿತು. ಚಿತ್ರವು ವರ್ಷಗಟ್ಟಲೇ ಯಶಸ್ಸಿ ಪ್ರದರ್ಶನ ಕಾಣುವ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ ಎಂದೇ ಖ್ಯಾತರಾದರು.
ಬೆಂಗಳೂರಿನ ನೆಲಮಂಗಲದ ಅಡಕಮರನಹಳ್ಳಿಯಲ್ಲಿ ಜುಲೈ 2, 1980ರಲ್ಲಿ ಕಿಶನ್ ಮತ್ತು ಸುಲೋಚನ ಎಂಬ ದಂತಿಗಳ ಮೂರನೇ ಮಗನಾಗಿ ಗಣೇಶ್ ಜನಿಸಿದರು. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದುಕೊಂಡಿದ್ದಾರೆ.
ನಟ ಗಣೇಶ್ ಅವರು 2008 ರಲ್ಲಿ ಶಿಲ್ಪಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದಂಪತಿಗಳಿಗೆ ಓರ್ವ ಪುತ್ರ ಮತ್ತು ಪುತ್ರಿಯಿದ್ದಾರೆ. ಪತ್ನಿ ಶಿಲ್ಪಾ ಗಣೇಶ್ ಗೋಲ್ಡನ್ ಮೂವೀಸ್ ಅಡಿಯಲ್ಲಿ ಕೆಲ ಚಿತ್ರಗಳನ್ನು ನಿರ್ಮಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….