ದೊಡ್ಡಬಳ್ಳಾಪುರ, (ಜುಲೈ.02): ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮ ತಾಲೂಕಿನ ಆರೂಢಿ ಗ್ರಾಮದಲ್ಲಿ ಭಾನುವಾರ ಅದ್ಧೂರಿಯಾಗಿ ನೆರವೇರಿತು.
ಶ್ರೀ ನಾಡಪ್ರಭು ಕೆಂಪೇಗೌಡ ಯುವಕರ ಬಳಗದವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡರ ಪ್ರತಿಮೆಗೆ ಪೂಜೆ ನಂತರ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಮನುಶ್ರೀ, ವನಿತಾ, ಲಹರಿ, ಲೋಕೇಶ್, ಹೃತಿಕ್, ಹೃತ್ವಿಕ್, ಭುವನ್, ಸೃಜನ್ ಅವರನ್ನು ಸನ್ಮಾನಿಸಲಾಯಿತು.
ನಂತರ ಕೆಂಪೇಗೌಡರ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….