ದೊಡ್ಡಬಳ್ಳಾಪುರ, (ಜುಲೈ.02): ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಕಾರ್ಯಕ್ರಮ ತಾಲೂಕಿನ ಆರೂಢಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 02 ಗಂಟೆಗೆ ಆಯೋಜಿಸಲಾಗಿದೆ.
ಶ್ರೀ ನಾಡಪ್ರಭು ಕೆಂಪೇಗೌಡ ಯುವಕರ ಬಳಗದವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡರ ಪ್ರತಿಮೆಗೆ ಪೂಜೆ, 2022-23ನೇ ಸಾಲಿನ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಬೆಳ್ಳಿ ರಥದಲ್ಲಿ ಕೆಂಪೇಗೌಡರ ಮೆರವಣಿಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….