ಬೆಂಗಳೂರು, (ಜುಲೈ.02): ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ತಳಗವಾರ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಪುನೀತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ರಾಜ್ಯ ಅಧ್ಯಕ್ಷ ಆರ್.ಧರ್ಮಸೇನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಆದೇಶ ಪತ್ರದಲ್ಲಿ ಉಲ್ಲೇಖವಾಗಿರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲೂಕು, ವಿವಿಧ ಬ್ಲಾಕ್ ಸಮಿತಿಗಳ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮವಹಿಸುವಂತೆ ಧರ್ಮಸೇನ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಪರಿಶಿಷ್ಟ ವಿಭಾಗದ ರಾಜ್ಯ ಉಸ್ತುವಾರಿ ನೆಹೇಮಿಯ ರಾಜು, ರಾಜ್ಯ ಸಂಚಾಲಕ ರಾಮಕೃಷ್ಣಪ್ಪ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….