ಬೆಂ.ಗ್ರಾ.ಜಿಲ್ಲೆ, (ಜುಲೈ.03): “ಶ್ರೀ ಹಡಪದ ಅಪ್ಪಣ್ಣ ಜಯಂತಿ”ಯನ್ನು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.
“ಶ್ರೀ ಹಡಪದ ಅಪ್ಪಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ಬಾಲಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಮುಜರಾಯಿ ಇಲಾಖೆ ಅಧಿಕಾರಿ ಹೇಮಾವತಿ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….