ದೊಡ್ಡಬಳ್ಳಾಪುರ, (ಜುಲೈ.03): ನಗರದ ರೈಲ್ವೆ ಸ್ಟೇಷನ್ ಬಳಿಯ ಕೆಂಪೇಗೌಡ ಆಸ್ಪತ್ರೆಯ ಮಾಲೀಕರು ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸದ ಇರುವ ಕುರಿತಂತೆ ಕರವೇ ಕನ್ನಡಿಗರ ಬಣದ ದೂರಿನ ಹಿನ್ನಲೆಯಲ್ಲಿ ಕೆಂಪೇಗೌಡ ಆಸ್ಪತ್ರೆಗೆ ತಾತ್ಕಾಲಿಕವಾಗಿ ಬೀಗ ಹಾಕಲಾಗಿದೆ.
ದೂರಿನ ಹಿನ್ನಲೆಯಲ್ಲಿ ಸೋಮವಾರ ಸಂಜೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಆಸ್ಪತ್ರೆಗೆ ತೆರಳಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಆಡಳಿತಾಧಿಕಾರಿಗಳು ಯಾರೊಬ್ಬರು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಇಂದಿನಿಂದ ಆಸ್ಪತ್ರೆಯ ನೋಂದಣಿ ನವೀಕರಣ ಮಾಡದ ಹೊರತು ಆಸ್ಪತ್ರೆಯನ್ನು ತೆಗೆಯಲು ಅನುಮತಿ ಇರುವುದಿಲ್ಲ. ಆಸ್ಪತ್ರೆಯನ್ನು ಕಾನೂನು ಬಾಹಿರವಾಗಿ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಈ ಆಸ್ಪತ್ರೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಮಾಡಿಸಿಕೊಳ್ಳಿ ಎಂದು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಉತ್ತರ ನೀಡಿರಲಿಲ್ಲ. ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಆಸ್ಪತ್ರೆಗೆ ನೋಟಿಸ್ ನೀಡಿ ಇಂದಿನಿಂದ ಬೀಗ ಹಾಕಲಾಗಿದೆ. ನವೀಕರಣ ಮಾಡಿಸಿ ಸಕ್ಷಮ ಪ್ರಾಧಿಕಾರದ ಮುಂದೆ ಹಾಜರಾಗಿ ನೋಟಿಸ್ ಗೆ ಉತ್ತರ ನೀಡುವವರೆಗೂ ಆಸ್ಪತ್ರೆ ತೆರೆಯಲು ಅನುಮತಿ ಇರುವುದಿಲ್ಲ ಎಂದರು.
ಈ ವೇಳೆ ಎಎಸ್‌ಐ ಮಲ್ಲಿಕಾರ್ಜುನ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….