ಸಂತ ಶಿಶುನಾಳ ಶರೀಫ, ಹಡಪದ ಅಪ್ಪಣ್ಣ ಹಾಗೂ ಫ.ಗು.ಹಳಕಟ್ಟಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುಷ್ಪನಮನ

ಬೆಂಗಳೂರು, (ಜುಲೈ.03): ʻಈಶ್ವರ ಅಲ್ಲಾ, ನೀನೇ ಎಲ್ಲಾ’ ಎಂದು ಬೋಧಿಸಿ, ಅದನ್ನು ಆಚರಣೆಯಲ್ಲಿ ತಂದವರು ಕಳಸದ ಗುರು ಗೋವಿಂದ ಭಟ್ಟರು ಹಾಗೂ ಅವರ ಶಿಷ್ಯರಾದ ಕರ್ನಾಟಕದ ಕಬೀರ, ಸಂತ ಶಿಶುನಾಳ ಶರೀಫರು. ಮಂದಿರ-ಮಸೀದಿ, ಪುರಾಣ-ಕುರಾನ, ನಮನ-ನಮಾಜ್, ಅಲ್ಲಮ-ಅಲ್ಲಾ, ಜಂಗಮ-ಫಕೀರ, ಇವೆಲ್ಲಾ ಒಂದೇ, ಭಗವಂತನ ದರ್ಶನಕ್ಕೆ ನಾವು ಹಾಕಿಕೊಂಡ ವಿವಿಧ ಹಾದಿಗಳು ಎಂದು ತೋರಿಸಿದಂತಹ ದಾರ್ಶನಿಕರ ಪೈಕಿ ಶಿಶುನಾಳ ಶರೀಫರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು. 

ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಂಗಣದಲ್ಲಿ ಹಮ್ಮಿಕೊಂಡ ಸಂತ ಶಿಶುನಾಳ ಶರೀಫರ, ಹಡಪದ ಅಪ್ಪಣ್ಣನವರ ಹಾಗೂ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 

ಕಳಸದ ಗುರು ಗೋವಿಂದ ಭಟ್ಟರು ಹಾಗೂ ಸಂತ ಶಿಶುನಾಳ ಶರೀಫರು ಹಿಂದೂ ಹಾಗೂ ಇಸ್ಲಾಂ ಧರ್ಮಗಳ ಸಮಾನತೆ, ಸಮನ್ವಯ ಹಾಗೂ ಸಮಭಾವನ್ನು, ಸಮಚಿತ್ತ ಹಾಗೂ ಸಮದೃಷ್ಟಿಯಿಂದ ನೋಡಿದ ‘ಸಮಾನತೆಯ ಹರಿಕಾರರು‘ ಕಳಸದ ಗುರು ಗೋವಿಂದಭಟ್ಟರು ಹಾಗೂ ಸಂತ ಶಿಶುನಾಳ ಶರೀಫರು. ಇವರಿಬ್ಬರೂ ದೈವಭಕ್ತರು, ಆತ್ಮಜ್ಞಾನಿಗಳು, ತತ್ವಜ್ಞಾನಿಗಳು, ವಿಚಾರವಾದಿಗಳು, ವಿಮರ್ಶಕರು, ಶಾಂತಿ ಹಾಗೂ ಕ್ರಾಂತಿ ಪುರುಷರು, ಸಮಾಜ ಸುಧಾರಕರು, ನೀತಿ ಬೋಧಕರು ಹಾಗೂ ತ್ರಿಕಾಲ ಜ್ಞಾನಿಗಳು. ಎಲ್ಲಕ್ಕಿಂತ ಹೆಚ್ಚಾಗಿ ಇವರಿಬ್ಬರೂ ಸಮಸಮಾಜದ, ಮಾನವತೆಯ ಎರಡು ಕಣ್ಣುಗಳಾಗಿ ‘ಮಹಾನ್ ಮಾನವತಾವಾದಿ’ಗಳಾಗಿ ಸಮಾಜಕ್ಕೆ ಬೆಳಕನ್ನು ಕೊಟ್ಟವರು ಎಂದು ನೆನಪಿಸಿಕೊಂಡರು.

ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿ, ತಮ್ಮ ಕಾರ್ಯಕ್ಷಮತೆಯಿಂದ ಎಲ್ಲರಿಗೂ ಮಾದರಿಯಾಗಿದ್ದವರು ಹಡಪದ ಅಪ್ಪಣ್ಣನವರು. ಸಾಮಾಜಿಕ ಸಮಾನತೆಯ ಹರಿಕಾರರಾದ  ಅಪ್ಪಣ್ಣನವರು ಸುಮಾರು 250ಕ್ಕೂ ಹೆಚ್ಚು ವಚನಗಳನ್ನು ʻಅಪ್ಪಣ್ಣ ಪ್ರಿಯ ಚನ್ನಬಸವಣ್ಣʼ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರಿಗೆ ಅಪ್ಪಣ್ಣ ಪ್ರಾಣವೇ ಆಗಿದ್ದರು. ಇದಕ್ಕೆ ಸಾಕ್ಷಿ ಕಲ್ಯಾಣಕ್ರಾಂತಿಯ ಕೊನೆಯ ದಿನಗಳ ಕುರಿತ  ಶೂನ್ಯ ಸಂಪಾದನೆಯಲ್ಲಿನ ವಿವರಗಳಿಂದ  ನಮಗೆ ಸ್ಪಷ್ಟಪಡಿಸುತ್ತವೆ. ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದಕ್ಕೆ ಹಡಪದ ಆಪ್ಪಣ್ಣ ಒಂದು ಉತ್ತಮ ಉದಾಹರಣೆಯಾಗಿ ಇರುತ್ತಾರೆ. ಆದರೆ ನಮ್ಮಲ್ಲಿ ಹಡಪದ ಅಪ್ಪಣ್ಣನ ಕುರಿತು, ಅವರ ರಚಿಸಿದ ವಚನಗಳ ಕುರಿತು ಹಾಗೂ ಅವರ ಜೀವನದ ಕುರಿತು ಇನ್ನೂ ಹೆಚ್ಚಿನ ಸಂಶೋಧನೆಯಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಜನರಿಗೆ ಗೊತ್ತಿಲ್ಲದೆ, ಕಬ್ಬಿಣದ ಕಡಲೆಯಂತಿದ್ದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ವಚನಕಾರರು ಜನರಿಗೆ ಅರ್ಥ ಆಗುವಂತೆ ನಮ್ಮ ಜೀವ ಭಾಷೆಯಾಗಿರುವ ಕನ್ನಡ ಭಾಷೆಯಲ್ಲಿ ತಿಳಿಸಿದರು ಫ.ಗು.ಹಳಕಟ್ಟಿಯವರು 200 ವಚನಕಾರರ ವಚನಗಳನ್ನು ಸಂಗ್ರಹಿಸಿ, ಮುಂದಿನ ತಲೆಮಾರಿಗೆ ನೀಡುವ ಮಹಾನ್ ಮೌಲ್ಯಯುತವಾದ ಕೆಲಸ ಮಾಡಿದರು. ಕರ್ನಾಟಕದ ಮೂಲೆ ಮೂಲೆಯನ್ನು ತಿರುಗಿ ತಾಳೆಗರಿಗಳಲ್ಲಿ ಇದ್ದ ವಚನಗಳನ್ನು ಪರಿಷ್ಕರಿಸಿ ಪ್ರಕಟಿಸಿದ ಕೀರ್ತಿ ಅವರದು ಎಂದ ನಾಡೋಜ ಡಾ.ಮಹೇಶ ಜೋಶಿಯವರು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ನಿಕಟ ಒಡನಾಟವನ್ನು ಇಟ್ಟು ಕೊಂಡಿದ್ದ ಫ.ಗು.ಹಳಕಟ್ಟಿಯವರು ಆರಂಭದ ದಿನಗಳಲ್ಲಿ ಪರಿಷತ್ತಿಗೆ ಬೆನ್ನುಲುಬಾಗಿದ್ದರು. 1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ಸ್ಮರಿಸಿ ಕೊಂಡು ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ  ಫ.ಗು.ಹಳಕಟ್ಟಿಯವರ ಜನ್ಮದಿನವನ್ನು “ವಚನ ಸಾಹಿತ್ಯ ಸಂರಕ್ಷಣಾ ದಿನ” ವನ್ನಾಗಿ ಆಚರಿಸಲಾಗುತ್ತಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ವಿವರಿಸಿದರು.

ಸಂತ ಶಿಶುನಾಳ ಶರೀಫರ, ಹಡಪದ ಅಪ್ಪಣ್ಣನವರ ಹಾಗೂ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆಯ ಪುಷ್ಪನಮನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಹಾಗೂ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಡಾ.ಬಿ.ಎಂ. ಪಟೇಲ್ ಪಾಂಡು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ, ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ.ಎನ್.ಎಸ್.ಶ್ರೀಧರ ಮೂರ್ತಿ, ವಿಶೇಷ ಕರ್ತವ್ಯಾಧಿಕಾರಿ ಚಿಕ್ಕತಿಮ್ಮಯ್ಯ ಸಿ. ಹಾಗೂ ಸಿಬ್ಬಂದಿಗಳು ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!