ದೊಡ್ಡಬಳ್ಳಾಪುರ, (ಜುಲೈ.03): ತಾಲೂಕಿನ ಚಿಕ್ಕನಹಲ್ಲಿ ಸರ್ಕಾರಿ ಹಿರಿಯ ಪಾಠ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಗುರುವಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರುಗಳನ್ನು ಒಗ್ಗೂಡಿಸಿ ಗುರುವಂದನೆ ಮತ್ತು 24 ವರ್ಷಗಳ ಕಾಲ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಕರ ರಾಮಣ್ಣ ಅವರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯರು, ಎಸ್.ಡಿ.ಎಂ.ಸಿ ಹಾಲಿ ಮತ್ತು ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು, ವಿನಾಯಕ ಗೆಳೆಯರ ಬಳಗದ ಸದಸ್ಯರು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….