ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ: ಹೆಚ್.ಡಿ.ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.06): ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮಾಜಿ ಉಪಪ್ರಧಾನಮಂತ್ರಿ ಡಾ:ಬಾಬು ಜಗಜೀವನ್ ರಾಂ ಅವರ 37ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು,  ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ವಿಚಾರ ಮಾಡುತ್ತೇನೆ. ಅವರ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷ ರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿದ ಕಾರಣಕ್ಕೆ ವಿಷ ಕುಡಿದಿದ್ದಾರೆ ಎಂದರು. 

ಹೆಚ್.ಡಿ.ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ಧಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು  ಪಡೆದಿದ್ದರೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್, ಏಪ್ರಿಲ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ ಎಂದರು. 

ಹೆಚ್.ಡಿ.ಕೆ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೆಚ್.ಡಿ.ಕುಮಾರಸ್ವಾಮಿ ಅವರ  ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ? ಎಂದು ಪ್ರಶ್ನಿಸಿದರು. 

ಮಾಜಿ ಶಾಸಕ ಯತೀಂದ್ರ ಅವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತನಾಡಿ ಅವರ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮನೆ ಮಗ, ಅವರ ಅಣ್ಣ ಸಚಿವರಾಗಿದ್ದವರು, ಅವರ ಪತ್ನಿ ಶಾಸಕರು,ಅವರ ತಂದೆ ಪ್ರಧಾನಿಗಳಾಗಿದ್ದವರು, ಅವರ ಅಣ್ಣನ ಮಕ್ಕಳು ಶಾಸಕರಾಗಿದ್ದಾರಲ್ಲ, ಅವರನ್ನು ಏನಂತ ಕರೆಯಬೇಕು ಎಂದು ಕೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]