ಮೂಡಿಗೆರೆ, (ಜುಲೈ.08): ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡೂ ಬಸ್‌ಗಳ ಚಾಲಕರಿಗೆ ಗಂಭೀರ ಗಾಯಗಳಾಗಿವೆ.
ರಸ್ತೆಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಚಾಲಕರಿಗೆ ಎದುರಿನಿಂದ ಬಂದ ವಾಹನ ಕಾಣಿಸದೆ ಅಪಘಾತ ಸಂಭಿಸಿದೆ.
ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಮತ್ತು ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಕಾಲಿಗೆ ಗಂಭೀರವಾಗಿ ಗಾಯಗೊಂಡ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬಸ್ ಅಪಘಾತ ನಡೆದ ಸ್ಥಳದಿಂದ ಕೊಟ್ಟಿಗೆಹಾರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲವು ಪ್ರಯಾಣಿಕರು ಬಸ್‌ನಿಂದ ಇಳಿದು 10 ಕಿ.ಮೀ. ನಡೆದು ಕೊಟ್ಟಿಗೆಹಾರ ಸೇರಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….