ಮಹಿಳಾ ಉದ್ಯೋಗಿ, ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ: ಪರಿಶೀಲಿಸಿ ಯೋಗ್ಯ ನಿರ್ಧಾರ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಜುಲೈ.8): ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು. 

ಮುಟ್ಟಿನ ರಜೆ ಪರಿಶೀಲನೆ: ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. 

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದರು. 

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದರು. 

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ. 

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ: ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು. 

ಸಮ ಸಮಾಜ ಬಂದರೆ ಶಾಂತಿಯ ತೋಟ: ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. 

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ: ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು  ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು. 

ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!