ದೊಡ್ಡಬಳ್ಳಾಪುರ, (ಜುಲೈ.10): ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ವಿದ್ಯಾರ್ಥಿಗಳು, ಪ್ರಯಾಣಿಕರನ್ನು ಸಂಕಷ್ಟಕ್ಕೀಡುಮಾಡಿದ್ದು, ಪ್ರತಿ ನಿತ್ಯ ಒಂದಲ್ಲ ಒಂದು ಕಡೆ ಪ್ರತಿಭಟನೆಗಳು ನಡೆಯುತ್ತಲೇ ಇದ್ದರು, ವಿದ್ಯಾರ್ಥಿಗಳ ಸಂಕಷ್ಟವನ್ನು ಕೇಳುವವರೇ ಇಲ್ಲವಾಗಿದೆ.
ಶನಿವಾರವಷ್ಟೆ ಉಜ್ಜನಿ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆದಿದ್ದ ಬೆನ್ನಲ್ಲೇ, ಸೋಮವಾರ ಬೆಳಗ್ಗೆ ತಾಲೂಕಿನ ಹುಲಿಕುಂಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ತಡೆದಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ-ತುಮಕೂರು ಮಾರ್ಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಒಂದೇ ಬಸ್ಸಿನಲ್ಲಿ 130ಕ್ಕು ಹೆಚ್ಚು ಮಂದಿ ಪ್ರಯಾಣಿಕರು ಸಾಗಬೇಕಾದ ಅನಿವಾರ್ಯತೆ ಇದೆ. ದಿನ ನಿತ್ಯ ಸಮಸ್ಯೆಯ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದ್ದರು ಹೆಚ್ಚುವರಿ ಬಸ್ ಬಿಡದ ಕಾರಣ ಬಸ್ಸಿನ ಡೋರ್ನಲ್ಲಿ ನೇತಾಡಿಕೊಂಡು ತೆರಳಬೇಕಾದ ಪರಿಸ್ಥಿತಿ ಇದ್ದು, ಆಯತಪ್ಪಿ ಬಿದ್ದು ಸತ್ತರೆ ಹೊಣೆ ಯಾರೆಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬಂದು ಸಮರ್ಪಕ ಬಸ ವ್ಯವಸ್ಥೆ ಕಲ್ಪಿಸದ ಹೊರತು ಬಸ್ ಬಿಡುವುದಿಲ್ಲವೆಂದು ಪಟ್ಟುಹಿಡಿದಿರುವ ವಿದ್ಯಾರ್ಥಿಗಳು, ತಾಲೂಕಿನಲ್ಲಿ ಸಾರಿಗೆ ವ್ಯವಸ್ಥೆ ಹದಗೆಟ್ಟಿದ್ದರು ಕ್ರಮಕೈಗೊಳ್ಳಬೇಕಾದ ಜನಪ್ರತಿನಿದಿಗಳು ತಮಗೆ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….