ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಬಸವರಾಜ ಬೊಮ್ಮಾಯಿ ಆಗ್ರಹ: ಕೃತ್ಯದ‌ ಹಿಂದೆ ದೊಡ್ಡ ಶಕ್ತಿ‌ ಇರುವ ಸಾಧ್ಯತೆಯೆಂದು ಕಳವಳ

ಬೆಂಗಳೂರು, (ಜುಲೈ.10): ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪೂರ್ವ ನಿಯೋಜಿತ ಕೊಲೆಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. 

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪವಾದ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ಕೊಲೆಗಡುಕ ಕೊಲೆ ಮಾಡಿ ಓಡಿ ಹೋಗುತ್ತಾರೆ. ಈ ಕೊಲೆ ಮಾಡಿದ ವ್ಯಕ್ತಿ ಅವರನ್ನು ಪೈಶಾಚಿಕವಾಗಿ ಹತ್ಯೆ ಮಾಡಿದ್ದಾರೆ.

ಜೈನ ಮುನಿಗಳು ಸಾಮಾನ್ಯವಾಗಿ ಯಾರ ಮನಸಿಗೂ ನೋವಾಗದಂತೆ ಮಾತನಾಡುತ್ತಾರೆ‌. ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡುವುದಿಲ್ಲ. ಇಂತಹ ಮುನಿಗಳ ಹತ್ಯೆಯಾಗಿದ್ದು ನೋಡಿದರೆ ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ ಅನಿಸುತ್ತದೆ ಎಂದು ಹೇಳಿದರು.

ಇದು ಕೋಲ್ಡ್ ಬ್ಲಡೆಡ್ ಮರ್ಡರ್ ಆಗಿದೆ. ಅವರು ಕರೆಂಟ್ ಶಾಕ್ ಕೊಟ್ಟು ಹತ್ಯೆ ಮಾಡಲು ಎಷ್ಟು ಸಮಯ ಆಲೋಚನೆ ಮಾಡಿರಬಹುದು. ಇದು ಮುನಿಗಳಿಗೆ ಹತ್ತಿರ ಇದ್ದವರೇ ಮಾಡಿದ್ದಾರೆ. ಹಣಕಾಸಿನ ವ್ಯವಹಾರಕ್ಕೂ ಮುನಿಗೂ ಯಾವುದೇ ಸಂಬಂಧ ಇಲ್ಲ. ಮುನಿಗಳ ಹತ್ಯೆ ಯಾಕೆ ಆಯಿತು ಅಂತ ಪೊಲಿಸರು ಹೇಳುತ್ತಿಲ್ಲ. ಪ್ರಕರಣ ಬೇಗ ಬೇಧಿಸಿದ್ದು ಸರಿ ಆದರೆ, ಪೊಲಿಸರು ಅಷ್ಟು ಬೇಗ ಪ್ರಕರಣ ಮುಕ್ತಾಯ ಮಾಡುವ ರೀತಿ ಮಾತನಾಡಿದ್ದಾರೆ. ಅವರು ಕೊಲೆ ಮಾಡಿ ಅಲ್ಲಿಂದ ಸಾಗಿಸಲು ಕೇವಲ ಇಬ್ಬರು ಮಾತ್ರ ಇರಲು ಸಾಧ್ಯವಿಲ್ಲ. ಅಲ್ಲಿಂದ ಸಾಗಿಸಲು ಯಾವ ವಾಹನ ಬಳಸಿದರು. ಅವರು ಹೆಣ ತುಂಡು ಹೇಗೆ ಮಾಡಿದರು. ಜೈನ ಧರ್ಮ ಯಾವುದೇ ಪ್ರಚೋದನೆ ಮಾಡುವುದಿಲ್ಲ. ಅಂತಹ ಮುನಿಗಳ ಹತ್ಯೆಯಾಗಿದೆ ಅಂದರೆ ಇದರ ಹಿಂದೆ ದೊಡ್ಡ ಶಕ್ತಿ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. 

ಕಲಬುರ್ಗಿಯಲ್ಲಿ ಮರಳು ಮಾಫಿಯಾದವರು ಹೆಡ್ ಕಾನ್ ಸ್ಟೇಬಲ್ ಹತ್ಯೆ ಮಾಡುತ್ತಾರೆ. ನಂಜನಗೂಡಿನಲ್ಲಿ ನಡೆದ ಹತ್ಯೆ, ಬೀದರ್ ನಲ್ಲಿ ಹಣ ವಸೂಲಿಗೆ ಏಜೆಂಟ್ ಗೆ ಒತ್ತಡ ಇದೆ ಅಂತ ಆರೋಪ ಮಾಡಿದ್ದಾನೆ. ಈ ಬಗ್ಗೆ ಎಫ್ ಐ ಆರ್ ಕೂಡ ಆಗಿದೆ.  ಕಲಬುರ್ಗಿಯಲ್ಲಿ ಒಬ್ಬ ಪೊಲಿಸ್ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಷ್ಟು ಬೇಗ ಹದಗೆಟ್ಟಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಅಂತ ತೋರಿಸಬೇಕು ಅಂದರೆ  ಸರ್ಕಾರ  ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿಬೇಕು. ಇಲ್ಲದಿದ್ದರೆ ಸಮಾಜ ಘಾತುಕ ಶಕ್ತಿಗಳು ತಾವು ಏನು ಮಾಡಿದರೂ ರಕ್ಷಣೆಗೆ ಇದ್ದಾರೆ ಎಂದು ಭಯವಿಲ್ಲದೆ ಓಡಾಡುತ್ತಾರೆ. ಜೈನ ಮುನಿಗಳ ಸಾವಿಗೆ ನ್ಯಾಯ ಕೊಡಬೇಕಾದರೆ, ಈ ವಿಚಾರದಲ್ಲಿ ಆ ಕಡೆ ಈ‌ಕಡೆ ಅನ್ನದೆ ಸರ್ಕಾರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದೆ ಅಂತ ತೋರಿಸಬೇಕಾದರೆ ಸಿಬಿಐ ತನಿಖೆಗೆ ಒಪ್ಪಿಸಬೇಕು.‌ಇಲ್ಲದಿದ್ದರೆ ರಾಜ್ಯದ ಜನತೆ ಪ್ರತಿಭಟನೆ ನಡೆಸುತ್ತಾರೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!