Harithalekhani ದಿನದ ಚಿತ್ರ: ನದಿ ನರಸಿಂಹಸ್ವಾಮಿ ದೇವಾಲಯ

ಬೆಂಗಳೂರಿನಿಂದ ಮೈಸೂರಿಗೆ ಹೋಗುವ ಹೆದ್ದಾರಿಯಲ್ಲಿ ರೇಷ್ಮೆಯ ನಾಡು ಎಂದೇ ಹೆಸರಾದ ಚನ್ನಪಟ್ಟಣದ ಹೊರವಲಯದಲ್ಲಿರುವ ದೊಡ್ಡ ಮಳೂರಿನ ಬಳಿ ಬಲಕ್ಕೆ ತಿರುಗಿದರೆ ಪುರಾತನ ದೇವಸ್ಥಾನವಿರುವ ನದಿ ನರಸಿಂಹಸ್ವಾಮಿಯ ನೆಲವೀಡಿಗೆ ಹೋಗುತ್ತೇವೆ.

ಕಣ್ವ ಮಹರ್ಷಿಗಳು ಪ್ರತಿಷ್ಠಾಪಿಸಿದ ಈ ನರಸಿಂಹಸ್ವಾಮಿ ನದಿಯ ಪಕ್ಕದಲ್ಲಿರುವ ಕಾರಣ ನದಿ ನರಸಿಂಹ ಎಂದೇ ಖ್ಯಾತನಾಗಿದ್ದಾನೆ. ಈಗ ಊರಿನ ಹೊರಗೆ ದೇವಾಲಯವಿದೆ. ಆದರೆ, ಹಿಂದೆ ಊರೇ ಇಲ್ಲಿತ್ತು ಎನ್ನುತ್ತಾರೆ ಊರ ಹಿರಿಯರು.

ಒಮ್ಮೆ ಪ್ರವಾಹ ಬಂದು ಊರಿಗೆ ಊರೇ ಮುಳುಗಿಹೋಯಿತು. ಆಗ ಇಲ್ಲಿ ಉಳಿದಿದ್ದೆಲ್ಲಾ ಬರಿ ಮರಳು. ಹೀಗಾಗಿ ಊರು ಮರಳೂರು ಎಂದು ಹೆಸರಾಯ್ತು. ಚಿಕ್ಕ ಮರಳೂರು, ದೊಡ್ಡ ಮರಳೂರು ಎಂಬ ಭಾಗವೂ ಆಯ್ತು. ದೊಡ್ಡ ಮರಳೂರು ಅಪ್ರಮೇಯನ ದೇವಾಲಯದಿಂದ ಖ್ಯಾತವಾದರೆ, ಚಿಕ್ಕಮರಳೂರು ನರಸಿಂಹಸ್ವಾಮಿಯಿಂದ ಖ್ಯಾತವಾಯ್ತು.

ಒಮ್ಮೆ ಕಣ್ವ ಮಹರ್ಷಿಗಳ ಕನಸಿನಲ್ಲಿ ಬಂದ ಲಕ್ಷ್ಮೀನಾರಾಯಣ, ಕಾವೇರಿಯ ತಟದಲ್ಲಿ ತನ್ನನ್ನು ಪ್ರತಿಷ್ಠಾಪಿಸಿ ಪೂಜಿಸುವಂತೆ ಸೂಚಿಸಿದನಂತೆ. ಅಂದು ಕಣ್ವರು ಪ್ರತಿಷ್ಠಾಪಿಸಿದ ಈ ನರಸಿಂಹ ಅಲ್ಲಿಯೇ ನೆಲೆಸಿ ತನ್ನ ಬಳಿಗೆ ಬರುವ ಭಕ್ತರನ್ನು ಪೊರೆಯುತ್ತಿದ್ದಾನೆ ಎನ್ನುತ್ತಾರೆ ಅರ್ಚಕರು.

ನಾಲ್ವಡಿ ಕೃಷ್ಣರಾಜ ಒಡೆಯರು  ದೇವಾಲಯಕ್ಕೆ 12 ಎಕರೆ ಭೂಮಿಯನ್ನು ಇನಾಂ ಆಗಿ ನೀಡಿದ್ದರು ಎಂಬುದನ್ನು ಇತಿಹಾಸ ತಿಳಿಸುತ್ತದೆ. ಸ್ವಾತಿ ನಕ್ಷತ್ರದಲ್ಲಿ ನಡೆಯುವ ಪೂಜೆ ಇಲ್ಲಿನ ವಿಶೇಷ. ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಶನಿವಾರ ಇಲ್ಲಿ ಪರ ನಡೆಯುತ್ತದೆ.

ಪಾಂಚರಾತ್ರಾಗಮ ರೀತ್ಯ ನಿತ್ಯ ಪೂಜೆ, ಅಭಿಷೇಕ ಜರುಗುತ್ತದೆ. ಪ್ರತಿ ಮಂಗಳವಾರ ದೇವಾಲಯದಲ್ಲಿ ವಿಶೇಷ ಪೂಜೆ ಇರುತ್ತದೆ.

ನದಿ ನರಸಿಂಹನ ದೇವಾಲಯ ಸಾಧಾರಣ ಕಗ್ಗಲಿನಿಂದ ನಿರ್ಮಿಸಲಾಗಿದೆ. ದೇವಾಲಯದ ಬಿತ್ತಿಗಳಲ್ಲಿ ಯಾವುದೇ ವಿಶೇಷ ಕೆತ್ತನೆಗಳಿಲ್ಲ. ಆದರೆ, ದೇವಾಲಯದ ಗರ್ಭಗೃಹದಲ್ಲಿರುವ ಮೂರ್ತಿ ಮನಮೋಹಕವಾಗಿದೆ.

ಲಕ್ಷ್ಮೀನರಸಿಂಹಸ್ವಾಮಿಯ ಶಾಂತವದನ ಹೃನ್ಮನ ಸೆಳೆಯುತ್ತದೆ. ಭಕ್ತಿಭಾವ ಮೂಡಿಸುತ್ತದೆ. ಗರ್ಭಗೃಹದ ಪಕ್ಕದಲ್ಲಿ ವಿಘ್ನನಿವಾರಕ ವಿನಾಯಕನ ಸುಂದರ ವಿಗ್ರಹವಿದೆ. ದೇವಾಲಯದ ಗರ್ಭಗೃಹದ ಮುಂದೆ ಜನರು ಸಾಲುಗಟ್ಟಿ ನಿಲ್ಲಲು ನಿರ್ಮಿಸಿರುವ ಕಬ್ಬಿಣದ ಸರಳುಗಳಿಗೆ ಸುಲಿಯದ ತೆಂಗಿನ ಕಾಯಿಗಳನ್ನು ಭಕ್ತರು ಕಟ್ಟಿರುವುದು ಗಮನ ಸೆಳೆಯುತ್ತದೆ. ಇಲ್ಲಿ ಹರಕೆ ಹೊತ್ತು ತೆಂಗಿನ ಕಾಯಿ ಕಟ್ಟಿದರೆ ನೆರವೇರುತ್ತದೆ ಎಂಬುದು ನಂಬಿಕೆ. ಅಂತೆಯೇ ವಿವಿಧ ಧಾನ್ಯಗಳನ್ನು ಕೈಯಲ್ಲಿ ಹಿಡಿದು ಅಗರಬತ್ತಿ ಹಚ್ಚಿಸಿ ಅದರಲ್ಲಿ ಸಿಕ್ಕಿಸಿ ದೇವಾಲಯಕ್ಕೆ 48 ಪ್ರದಕ್ಷಿಣೆ ಹಾಕಿದರೆ ಅಂದುಕೊಂಡದ್ದು ನಡೆಯುತ್ತದೆ ಎಂದೂ ಜನ ನಂಬಿದ್ದಾರೆ.

ದೇವಾಲಯದ ಸುತ್ತಲೂ ಪ್ರಹ್ಲಾದ, ಧ್ರುವ, ಹನುಮಂತ, ಹಯಗ್ರೀವ, ಪರಾಶರ ಮೊದಲಾದ ಕೆತ್ತನೆಗಳಿವೆ.

ಸಂಗ್ರಹ ವರದಿ: ಗಣೇಶ್. ಎಸ್., ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!