ಕೇರಳ ಮಾಜಿ ಸಿಎಂ ಓಮೆನ್ ಚಾಂಡಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಬೆಂಗಳೂರು, (ಜು 18): ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ  ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ,  ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು. 

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು.  ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು. 

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು. 

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ. 

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]