ದೊಡ್ಡಬಳ್ಳಾಪುರ, (ಜುಲೈ.23): ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಎಚ್.ಎ.ನಾಗರಾಜು ಮತ್ತು ರಮ್ಯಾ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಹನುಮಂತರಾಯಪ್ಪ ಮತ್ತು ಗಂಗರತ್ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದರು.
ಹದಿನೈದು ಸದಸ್ಯ ಬಲದ ಪಂಚಾಯಿತಿಯಲ್ಲಿ ಹನ್ನೊಂದು ಜನ ಜೆಡಿಎಸ್ ಬೆಂಬಲವಾಗಿ ಹಾಗೂ ನಾಲ್ಕು ಜನ ಕಾಂಗ್ರೆಸ್ ಪರವಾಗಿ ಮತ ಚಲಾವಣೆ ಮಾಡಿದ್ದರು.
ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎನ್ ಗಿರಿಜಾಂಬ ಪ್ರಕಟಿಸಿದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾರಾಯಣಪ್ಪ, ಚುನಾವಣಾ ಅಧಿಕಾರಿ ಗಿರಿಜಾಂಬ ಎನ್, ದೇವನಹಳ್ಳಿ ತಾಲೂಕು ಜೆಡಿಎಸ್ ಉಪಾಧ್ಯಕ್ಷರಾದ ದೇವರಾಜ್, ಮಂಜುನಾಥ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ನ್ಯಾಯವಾದಿ ರಾ.ಬೈರೇಗೌಡ, ಜೆಡಿಎಸ್ ಮುಖಂಡರಾದ ಗೌರೀಶ್, ರಾಮಣ್ಣ, ಮುದ್ದುಕೃಷ್ಣಪ್ಪ, ಪುರುಷೋತ್ತಮ್, ಉದಯ ಆರಾಧ್ಯ ಶುಭ ಕೋರಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….