BJP ಶಾಸಕರ ಅಮಾನತು: ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, (ಜುಲೈ.19): ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ:‌ ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.

ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ‌ಬಲ್ಡೋಜ್ ನೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು: ಇದು ಕ್ಷುಲ್ಲಕ, ‌ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ‌ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನಗಳ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಹಾ ಘಟಬಂಧನ್ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐಎಎಸ್ ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಿಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು  ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ‌ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸದನದಲ್ಲಿ ಇವತ್ತು ಈ ವಿಚಾರವಾಗಿ ಜೆಡಿಎಸ್, ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೆ ಅನ್ನೋ ಸರಿ ಅಂತ ಕಾಂಗ್ರೆಸ್ ‌ನವರು ನಡೆದುಕೊಂಡಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳಿಸಿ ಗಣ್ಯರನ್ನ ಬರ ಮಾಡಿಕೊಂಡಿಲ್ಲ ಎಂದು ಅವರು ತಿಳಿಸಿದರು.

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟ ಚಾರ ಉಲ್ಲಂಘನೆ ‌ಮಾಡಿಲ್ಲ. ಅಧಿಕಾರಿಗಳನ್ನು ಗುಲಾಮರಾನ್ನಾಗಿ ಮಾಡಿಕೊಂಡು ಅಧಿಕಾರಿಗಳನ್ನು ಯಾರ ಮನೆ ಬಾಗಿಲುಗೂ‌ ಕಳುಹಿಸಿಲ್ಲ. ಈ ಸರ್ಕಾರ ಸುಳ್ಳು ‌ಹೇಳಿದೆ. ವಿರೋಧ ಪಕ್ಷಗಳ ಬಲ್ಡೋಜ್ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ ಎಂದು ಅವರು ಘೋಷಣೆ ಮಾಡಿದರು.

ಕೆಲವು ಮಂತ್ರಿಗಳು ಶಾಸಕರನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ನಿಮ್ಮನ್ನು ಮುಗಿಸುವುದಾಗಿ ಸದನದಲ್ಲಿ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!