ದೊಡ್ಡಬಳ್ಳಾಪುರ, (ಜುಲೈ.20): ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಉಪನ್ಯಾಸಕಿಯೊಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ನಗರದ ಜಿ ರಾಮೇಗೌಡ ವೃತ್ತದ ಸಮೀಪ ನಡೆದಿದೆ.
ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತುಮಕೂರು ರಸ್ತೆ ಮಾರ್ಗವಾಗಿಯೇ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಖಾಸಗಿ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಉಪನ್ಯಾಸಕಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳು ಉಪನ್ಯಾಸಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….