ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ರಾಜ್ಯದ ಹಕ್ಕು ಕೇಳಿ ಎಂದರೆ ಬಿಜೆಪಿ ಸಂಸದರು ಚಳಿಜ್ವರ ಬಂದಂಗೆ ನಡುಗ್ತಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜು 20): ನಾನು ಆಯವ್ಯಯ ಸಿದ್ಧತೆಗೆ ಕುಳಿತಾಗ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ನೆಹರು, ಮಹಾತ್ಮ ಫುಲೆ, ಕುವೆಂಪು ನೆನಪಾಗುತ್ತಾರೆ. ಇವರೆಲ್ಲರ ಕನಸಿನ ನಾಡನ್ನು ಕಟ್ಟುವ ಆಶಯದ ಬಜೆಟ್ ರೂಪಿಸಬೇಕು ಎನ್ನುವುದು ನನ್ನ  ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು. 

ಸಾಮಾಜಿಕ ಸ್ವಾತಂತ್ರ್ಯ ಇಲ್ಲದ ರಾಜಕೀಯ ಸ್ವಾತಂತ್ರ್ಯ ಏನು ಪ್ರಯೋಜನ ಎಂದು ಡಾ.ಬಾಬಾಸಾಹೇಬ್ ಪ್ರಶ್ನಿಸಿದ್ದರು. ಅದಕ್ಕಾಗಿಯೇ ಅವರು, “ರಾಜಕೀಯ ಪ್ರಭುತ್ವದ ತಳಪಾಯ ಸಾಮಾಜಿಕ ಪ್ರಭುತ್ವದಲ್ಲಿರಬೇಕು” ಎಂದಿದ್ದರು. ಬಸವಣ್ಣ ದಾಸೋಹದ ಮಹತ್ವ ಹೇಳಿದ್ದರು. ಹೀಗೆ‌ ಈ ಎಲ್ಲಾ ಮಹಾನುಭಾವರ ಸರ್ವರನ್ನೂ ಒಳಗೊಳ್ಳುವ ಪ್ರಗತಿಯ ಮಾದರಿಯನ್ನು ನಾನು ಪಾಲಿಸಿದ್ದೇನೆ. ಸರ್ವರ  ಅಭಿವೃದ್ಧಿಗೆ ಪೂರಕವಾದ ಬಜೆಟ್ ರೂಪಿಸಿದ್ದೇನೆ. 

ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಬಜೆಟ್ ನಲ್ಲಿ ತಂದಿದ್ದೇವೆ. ಬಜೆಟ್ ನಲ್ಲಿ ಹೇಳಿದ್ದಕ್ಕೆ ಹಣ ಕೊಟ್ಟು ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಆಗಲೇ ಜಾರಿ ಮಾಡಿದ್ದೇವೆ. 

ನಾವು ಹೇಳಿದ್ದನ್ನು ಮಾಡಿದ್ದೇವೆ. ಬಿಜೆಪಿಯವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ” ಎಂದರು. ಆದರೆ ತಾವು ಹೇಳಿದಂತೆ ನಡೆದುಕೊಳ್ಳಲಿಲ್ಲ. ಹೀಗಾಗಿ ಬಿಜೆಪಿಯ ಟೊಳ್ಳುತನ, ಬೇಜವಾಬ್ದಾರಿತನ, ನಕಲಿತನ ನಾಡಿನ ಜನರೆದುರು ಬೆತ್ತಲಾಗಿದೆ ಎಂದರು. 

ಗುಜರಾತ್ ಮಾದರಿ ಭಾಷಣ ಕೊಚ್ಚುತ್ತಿದ್ದ ಬಿಜೆಪಿಯವರು ಕರ್ನಾಟಕದ ಗ್ಯಾರಂಟಿ ಮಾದರಿಗಳಿಂದ, ಕರ್ನಾಟಕದ ಅಭಿವೃದ್ಧಿ ಮಾದರಿಗೆ ಹೆದರಿದ್ದಾರೆ. 

ದುಡಿಯುವ ಜನರ ಜೇಬಿನಲ್ಲಿ ಹಣ ಇರಬೇಕು, ಶ್ರಮಿಕ ಜನರ ಜೇಬಿಗೆ ಹಣ ಹಾಕಬೇಕು ಎನ್ನುವುದು ಕರ್ನಾಟಕ ಮಾದರಿ. ಜನರ ಜೇಬಿಗೆ ಕೈ ಹಾಕಿ ಕಿತ್ತುಕೊಳ್ಳಬೇಕು ಎನ್ನುವುದು ಬಿಜೆಪಿಯವರ ಗುಜರಾತ್ ಮಾದರಿ. 

ಗುಜರಾತ್ ಮಾದರಿಯಲ್ಲಿ ಪೆನ್ನು, ಪೆನ್ಸಿಲ್, ಬಿಸ್ಕೆಟ್, ಬೆಣ್ಣೆ, ಮಂಡಕ್ಕಿ ಮೇಲೂ ಟ್ಯಾಕ್ಸ್ ಹಾಕಿದರು. ಕರ್ನಾಟಕ ಮಾದರಿಯಲ್ಲಿ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 6 ರಿಂದ 8 ಸಾವಿರ ರೂಪಾಯಿ ಉಳಿತಾಯ, ಉಪಯೋಗ ಆಗುವಂತಹ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪ್ರತೀ ದಿನ ನಾಡಿನ ಜನತೆ ನಮ್ಮ ಗ್ಯಾರಂಟಿಗಳ ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತೀ ದಿನ ಪ್ರತೀ ಕುಟುಂಬಕ್ಕೆ ಸರ್ಕಾರದ ಸ್ಪಂದನೆ ಸಿಗುತ್ತಿದೆ. ಇದು ಬಿಜೆಪಿಯ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ. ಅವರ ಹೊಟ್ಟೆಕಿಚ್ಚು ಅವರನ್ನೇ ಸುಡುತ್ತದೆ ಎಂದರು. 

ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆ ವಿಶ್ವಗುರುವಿಗೆ ತಮ್ಮ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಯಕನನ್ನು ಆರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬರೀ ಭಾಷಣದಿಂದ ನಾಡಿನ, ದೇಶದ ಜನರ ಸಂಕಷ್ಟ ಪರಿಹಾರ ಆಗುವುದಿಲ್ಲ ಎನ್ನುವ ಪಾಠವನ್ನು  ವಿಶ್ವಗುರುವಿಗೆ ಜನ ಕಲಿಸಿದ್ದಾರೆ ಎಂದರು. 

ಮಾರ್ಷಲ್ ಇಲ್ಲದಿದ್ದರೆ ಗತಿ ಏನು?: ಒಬ್ಬ ದಲಿತ ಡೆಪ್ಯುಟಿ ಸ್ಪೀಕರ್ ಗೆ ಬಿಜೆಪಿ ನಡೆಸಿಕೊಂಡ ರೀತಿ ಅತ್ಯಂತ ಅನಾಗರಿಕತನದ್ದಾಗಿತ್ತು. ಮಾರ್ಷಲ್ ಗಳು ಇಲ್ಲದೇ ಹೋಗಿದ್ದರೆ ಅವರ ಗತಿ ಏನಾಗುತ್ತಿತ್ತೋ ಗೊತ್ತಿಲ್ಲ. 

ಬಿಜೆಪಿಯವರು ಅವರ ಮೇಲೆ ದೈಹಿಕ‌ ಹಲ್ಲೆಯನ್ನೂ ನಡೆಸುತ್ತಿದ್ದರೇನೋ ಗೊತ್ತಿಲ್ಲ ಎನ್ನುತ್ತಾ ಸದನದಲ್ಲಿ ಬಿಜೆಪಿಯವರ ವರ್ತನೆಯ ಭೀಕರತೆಯನ್ನು ಖಂಡಿಸುವುದಾಗಿ ಹೇಳಿದರು. 

ಮೋದಿ ಕಂಡರೆ ಚಳಿಜ್ವರ ಬಂದಂಗೆ ನಡುಗುತ್ತಾರೆ: 15ನೇ ಹಣಕಾಸು ಆಯೋಗದಿಂದ ಕರ್ನಾಟಕ ನಾಡಿಗೆ ಅಪಾರ ಅನ್ಯಾಯ ಆಯಿತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನಮ್ಮ ಪಾಲಿನ, ನಮ್ಮ ಹಕ್ಕಾಗಿದ್ದ 5495 ಕೋಟಿ ಬರಲಿಲ್ಲ. 

ಕರ್ನಾಟಕದಿಂದಲೇ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರಿಂದ ಇಷ್ಟು ದೊಡ್ಡ ಅನ್ಯಾಯ ಆಯಿತು. ಇದನ್ನು ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರು ಪ್ರಶ್ನಿಸಬೇಕಿತ್ತು. ರಾಜ್ಯ ಬಿಜೆಪಿ ನಾಯಕರು, ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿತ್ತು. ಆದರೆ ಇವರೆಲ್ಲಾ ಮೋದಿ ಅವರ ಎದುರು ನಿಂತು ಕನ್ನಡಿಗರ ಪಾಲನ್ನು ಕೇಳಲು ಚಳಿ ಜ್ವರ ಬಂದವರಂತೆ ನಡುಗುತ್ತಾರೆ ಎಂದು ವ್ಯಂಗ್ಯವಾಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!