ಸರ್ಕಾರ, ಸ್ಪೀಕರ್ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ದೂರು, ಜಿಲ್ಲಾ ಮಟ್ಟದಲ್ಲಿ ಹೋರಾಟ – ಮಾಜಿ ಸಿಎಂ ಬೊಮ್ಮಾಯಿ‌

ಬೆಂಗಳೂರು, (ಜುಲೈ.20): ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್  ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ. 

ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಳಗನ್ನು ಕಳುಹಿಸಿದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿದರು.

ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದೆ‌. ಸ್ಪೀಕರ್ ಅವರು ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆ ಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ.  ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಅಂತ ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ  ವಿಶ್ವಾಸ ಇಲ್ಲ ಅಂತ ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ. ಈ ಸರ್ಕಾರ ತನ್ಬ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಟೆರೆರಿಸ್ಟ್ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂತಾರಾಷ್ಟ್ರೀಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಅಂತ ನಾವು ಆಗ್ರಹಿಸಿದ್ದೇವೆ. 

ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು.

ನಮ್ಮ ಸದಸ್ಯರನ್ನು ಅಮಾನತು ಮಾಡಿರುವುದರಿಂದ ನಾವು ಸದನವನ್ನು ಬಹಿಷ್ಕರಿಸುತ್ತೇವೆ‌. ಈ ಪ್ರಕರಣವನ್ನು ಜಿಲ್ಲಾ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!