ಉಪ ನಗರ ರೈಲು ಯೋಜನೆ ವಿಸ್ತರಣೆ, ನೈರುತ್ಯ ರೈಲ್ವೆಗೆ ಪತ್ರ: ದೊಡ್ಡಬಳ್ಳಾಪುರ ಸೇರಿದಂತೆ ರಾಜಧಾನಿಯ ಸುತ್ತಲಿನ ನಗರಗಳಿಗೆ ಸೌಲಭ್ಯ..!!

ಬೆಂಗಳೂರು, (ಜುಲೈ.24): ರಾಜಧಾನಿಯಲ್ಲಿನ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಾಗಡಿ, ದೊಡ್ಡಬಳ್ಳಾಪುರ, ಗೌರಿಬಿದನೂರು, ಬಂಗಾರಪೇಟೆಗೆ ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಯಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ರೈಲ್ವೆ ಸಚಿವಾಲಯವು ಅನುಮತಿ ನೀಡಬೇಕೆಂದು ಕೋರಿ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಉಪನಗರ ರೈಲು ಯೋಜನೆಯ ಪ್ರಗತಿ ಕುರಿತು ಸೋಮವಾರ ಇಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದ (ಕೆ-ರೈಡ್‌) ಉನ್ನತ ಅಧಿಕಾರಿಗಳೊಂದಿಗೆ ಅವರು ಸೋಮವಾರ ಪರಿಶೀಲನಾ ಸಭೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, “ಹಂತ-1ರಲ್ಲಿ ಉಪನಗರ ರೈಲು ಯೋಜನೆ ಕಾಮಗಾರಿ (148.17 ಕಿ.ಮೀ.) ನಡೆಯುತ್ತಿದೆ. ಇದನ್ನು ಸುತ್ತಲಿನ ಹಲವು ನಗರಗಳಿಗೆ ವಿಸ್ತರಿಸುವ ಅಗತ್ಯವಿದೆ. ಈ ಸಂಬಂಧ ಜೂನ್‌ 6ರಂದು ಸಭೆ ನಡೆಸಲಾಗಿತ್ತು. ಕೆ-ರೈಡ್‌ ಈ ಪ್ರಸ್ತಾವನೆಗೆ ಅಂದು ತಾತ್ತ್ವಿಕ ಒಪ್ಪಿಗೆ ನೀಡಿತ್ತು. ಮುಂದಿನ ಹೆಜ್ಜೆಯಾಗಿ ಈಗ ನೈರುತ್ಯ ರೈಲ್ವೆಗೆ ಪತ್ರ ಬರೆಯಲಾಗಿದೆ” ಎಂದರು.

ಉಪನಗರ ರೈಲು ಯೋಜನೆಯ ಹಂತ-1ರ ಕಾಮಗಾರಿಗಳು ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿವೆ. ಆದರೆ, ಹಂತ-2ನ್ನು 452 ಕಿ.ಮೀ.ಗಳಿಗೆ ವಿಸ್ತರಿಸಲು ಯೋಚಿಸಿದ್ದು, ಇದಕ್ಕೆ ಈಗಿನಿಂದಲೇ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳುವ ಜರೂರಿದೆ. ನಿಯಮಗಳ ಪ್ರಕಾರ ರಾಜ್ಯ ಸರಕಾರದ ಸಂಸ್ಥೆಯು ಕಾರ್ಯಸಾಧ್ಯತಾ ವರದಿ ತಯಾರಿಸಲು ಸಾಧ್ಯವಿಲ್ಲ. ಇದನ್ನು ರೈಲ್ವೆ ಮಂಡಲಿಯೇ ಮಾಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಅವರು, ಉಪನಗರ ರೈಲು ಯೋಜನೆಯ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು. ರೈಲು ವ್ಯವಸ್ಥೆಗೆ ಬೇಕಾದ ಬೋಗಿಗಳ ತಯಾರಿಕೆಗೆ ಬಿಡ್‌  ಅಂತಿಮಗೊಳಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಯೋಜನೆಯ ಕಾಮಗಾರಿಯನ್ನೂ ಖುದ್ದಾಗಿ ಪರಿಶೀಲಿಸಲಾಗುವುದು ಎಂದು ವಿವರಿಸಿದರು.

ಈ ಯೋಜನೆಗೆ 177.22 ಎಕರೆ ಭೂಮಿ ಅಗತ್ಯವಿತ್ತು. ಈ ಪೈಕಿ ಈಗಾಗಲೇ 164 ಎಕರೆಯ ಸ್ವಾಧೀನ ಮುಗಿದಿದೆ. ಆದರೆ ಉಳಿದ 12.39 ಎಕರೆ ಭೂಮಿ ರಕ್ಷಣಾ ಇಲಾಖೆ ಮತ್ತು ಸರಕಾರದ್ದಾಗಿದ್ದು, ಸ್ವಲ್ಪ ಕಗ್ಗಂಟಾಗಿದೆ. ಕೆ-ರೈಡ್‌ ಅಧಿಕಾರಿಗಳು ಸಂಬಂಧಿಸಿದವರ ಜತೆ ಮಾತುಕತೆ ನಡೆಸಿ, ಇದನ್ನು ಬೇಗನೆ ಬಗೆಹರಿಸಬೇಕು. ಯೋಜನೆಯ ಭಾಗವಾಗಿ ಸೋಲದೇವನಹಳ್ಳಿ ಮತ್ತು ದೇವನಹಳ್ಳಿಯಲ್ಲಿ ಎರಡು ಡಿಪೋ ನಿರ್ಮಿಸಲಾಗುವುದು ಎಂದು ಸಚಿವರು ನುಡಿದರು.

ಸಭೆಯಲ್ಲಿ ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕ ಗೌರವ್‌ ಗುಪ್ತ, ಕೆ- ರೈಡ್ ಯೋಜನಾ ನಿರ್ದೇಶಕ ರಾಜೇಂದ್ರ ಕುಮಾರ್‌ ಸಿಂಗ್‌ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪನಗರ ರೈಲು ವಿಸ್ತರಣೆಯ ರೂಪುರೇಷೆ: ಪ್ರಸ್ತುತ ಪ್ರಗತಿಯಲ್ಲಿರುವ 148 ಕಿ.ಮೀ. ವ್ಯಾಪ್ತಿಯ ಉಪನಗರ ರೈಲು ಯೋಜನೆಯಲ್ಲಿ ಒಟ್ಟು ನಾಲ್ಕು ಕಾರಿಡಾರ್‍‌ಗಳಿವೆ. ಇದು ಕ್ರಮವಾಗಿ ಬೆಂಗಳೂರು ನಗರ ರೈಲು ನಿಲ್ದಾಣದಿಂದ ದೇವನಹಳ್ಳಿ (41.4 ಕಿ.ಮೀ), ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿಯಿಂದ ವೈಟ್‌ಫೀಲ್ಡ್‌ (35.32 ಕಿ.ಮೀ) ಮತ್ತು ಹೀಳಲಿಗೆಯಿಂದ ರಾಜಾನುಕುಂಟೆವರೆಗೆ (46.25 ಕಿ.ಮೀ) ಉದ್ದವಿದೆ.

ಇದನ್ನು ಎರಡನೇ ಹಂತದಲ್ಲಿ ದೇವನಹಳ್ಳಿಯಿಂದ ಕೋಲಾರ (107 ಕಿ.ಮೀ), ಚಿಕ್ಕಬಾಣಾವರದಿಂದ ಡಾಬಸ್‌ಪೇಟೆ ಮೂಲಕ ತುಮಕೂರು (55 ಕಿ.ಮೀ), ಚಿಕ್ಕಬಾಣಾವರದಿಂದ ಮಾಗಡಿ (45 ಕಿ.ಮೀ), ಕೆಂಗೇರಿಯಿಂದ ಮೈಸೂರು (125 ಕಿ.ಮೀ), ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ (45 ಕಿ.ಮೀ), ಅವನ ತಮಿಳುನಾಡಿನ ಹೊಸೂರು (23 ಕಿ.ಮೀ) ಮತ್ತು ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರಿನವರೆಗೆ (52 ಕಿ.ಮೀ) ವಿಸ್ತರಿಸಬೇಕೆಂಬುದು ಸಚಿವ ಎಂ ಬಿ ಪಾಟೀಲ ಅವರ ಚಿಂತನೆಯಾಗಿದೆ.

ಇದರಿಂದಾಗಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬಂದು, ಇಲ್ಲಿರುವ ಉದ್ದಿಮೆಗಳಿಗೆ ಸುತ್ತಮುತ್ತಲ ನಗರ/ಪಟ್ಟಣಗಳಿಂದ ಉದ್ಯೋಗಿಗಳು ಸುಗಮವಾಗಿ ಬಂದು ಹೋಗಬಹುದು ಎನ್ನುವುದು ಅವರ ಆಶಯವಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!