ದೊಡ್ಡಬಳ್ಳಾಪುರ, (ಜುಲೈ.24): ಅವಧಿ ಮುಗಿದ ಹಿನ್ನೆಲೆಯಲ್ಲಿ ತಾಲೂಕಿನ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಅಧಿಕಾರಿ ಪಂಚಾಯತ್ ರಾಜ್ ಇಲಾಖೆಯ ಎಇಇ ರವೀಂದ್ರ ನೇತೃತ್ವದಲ್ಲಿ ಚುನಾವಣೆ ನಡೆಸಲಾಯಿತು.
34 ಮಂದಿ ಸದಸ್ಯ ಬಲದ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಆಶಾರಾಣಿ ಹಾಗೂ ಅನುರಾಧ ವಿ ಎನ್ನುವವರು ನಾಮಪತ್ರ ಸಲ್ಲಿಸಿದ್ದು, ಚುನಾವಣೆಯಲ್ಲಿ ಅನುರಾಧ ವಿ 13 ಮತಗಳನ್ನು ಪಡೆದರೆ, ಆಶಾರಾಣಿ 21 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು.
ಇನ್ನು ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ಸೌಭಾಗ್ಯಮ್ಮ ಮತ್ತು ಮುನಿಯಪ್ಪ ಎನ್ನುವವರು ನಾಮಪತ್ರ ಸಲ್ಲಿಸಿದ್ದು, ಮುನಿಯಪ್ಪ 14 ಮತಗಳನ್ನು ಪಡೆದರೆ, 20 ಮತಗಳನ್ನು ಪಡೆದು ಸೌಭಾಗ್ಯಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು.
ಈ ವೇಳೆ ಸಹಾಯಕ ಚುನಾವಣೆ ಅಧಿಕಾರಿ ಪಿಡಿಒ ಸೌಮ್ಯ ಹಾಗೂ ಸಿಬ್ಬಂದಿಗಳಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….