ಬೆಳಗಾವಿ, (ಜುಲೈ.25): “ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾರಾದರೂ ಅಸಡ್ಡೆ ತೋರಿದರೆ ಅಥವಾ ಫಲಾನುಭವಿಗಳಿಂದ ದುಡ್ಡು ಪಡೆದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು,” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನೋಂದಣಿ ಪ್ರಕ್ರಿಯೆಯಲ್ಲಿ ನಿಯಮ ಪಾಲನೆ ಮಾಡದ ಹಿನ್ನೆಲೆಯಲ್ಲಿ ಈಗಾಗಲೇ 3 ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ.
ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಹಣ ಪಡೆಯುವುದು ಗಮನಕ್ಕೆ ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು. ಅಸಡ್ಡೆ ಮಾಡಿದರೆ ಅವರೂ ಜವಬ್ದಾರರಾಗುತ್ತಾರೆ,” ಎಂದರು.
”ಗೃಹ ಲಕ್ಷ್ಮಿ ಅರ್ಜಿ ಅಪ್ ಲೋಡ್ ಮಾಡುವವರಿಗೆ ಸರಕಾರದಿಂದಲೇ ಪ್ರತಿ ಅರ್ಜಿಗೆ 12 ನೀಡಲಾಗುತ್ತಿದೆ. 10 ರೂ. ಅಪ್ ಲೋಡ್ ಮಾಡಲು ಹಾಗೂ ಪ್ರಿಂಟ್ ಔಟ್ ಕೊಡಲು 2 ನೀಡಲಾಗುತ್ತಿದೆ. ಹಾಗಾಗಿ ಜನರು ಯಾರಿಗೂ ದುಡ್ಡುಕೊಡಬೇಕಾಗಿಲ್ಲ.” ಎಂದು ಅವರು ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….