ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಇಒ ಆಗಿ ಮುನಿರಾಜು ನೇಮಕ

ಬೆಂಗಳೂರು, ( ಜುಲೈ.25): ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮುನಿರಾಜು ಎನ್ ಅವರನ್ನು ನೇಮಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಬಾಲಪ್ಪ ಆದೇಶಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ)ಗೆ ಸೇರಿದ ಗ್ರೂಪ್ ಎ (ಕಿರಿಯ ಶ್ರೇಣಿ) ವೃಂದದ ಈ ಕೆಳಕಂಡ ಕಾರ್ಯ ನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ / ಸಹಾಯಕ ಯೋಜನಾಧಿಕಾರಿ-1 ಸೇರಿದ 32 ಅಧಿಕಾರಿಗಳನ್ನು ಸೋಮವಾರ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ  ವರ್ಗಾಯಿಸಿ ಆದೇಶಿಸಿದ್ದಾರೆ .

ಇದರ ಅನ್ವಯ ಶ್ರೀನಾಥ್ ಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಲೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮುನಿರಾಜು ಎನ್ ಅವರನ್ನು ನೇಮಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….