ದೊಡ್ಡಬಳ್ಳಾಪುರ, (ಜುಲೈ.25): ಹಾಡು ಹಗಲೆ ನಾಡ ಬಂದೂಕು ಬಳಸಿ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊರಟಗೆರೆ ಮೂಲದ ಓರ್ವ ಹಾಗೂ ತಾಲೂಕಿನ ಇಬ್ಬರು, ನಗರದ ರಾಮಣ್ಣ ಬಾವಿ ಸಮೀಪ ವನ್ಯಜೀವಿಗಳನ್ನು ಭೇಟೆಯಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಬಂಧಿತರಿಂದ ಒಂದು ನಾಡ ಬಂದೂಕು, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗುತ್ತಿದ್ದು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿತರನ್ನು ತನಿಖೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….