ದೊಡ್ಡಬಳ್ಳಾಪುರ, (ಜುಲೈ 26): ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಚುನಾವಣೆ ಅಧಿಕಾರಿ ಅನಿತಾದೇವಿ ಎನ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸಮೂರ್ತಿ ಮತ್ತು ಮಂಜುನಾಥ್ ಉಮೇದುವಾರಿಕೆ ಸಲ್ಲಿಸಿದರು.
20 ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ 6 ಮಂದಿ ಮಂಜುನಾಥ್ ಪರವಾಗಿ ಮತಚಲಾಯಿಸಿದ್ದು, ಶ್ರೀನಿವಾಸ್ ಅವರಿಗೆ 14 ಮತಗಳು ದೊರೆತು ಅಧ್ಯಕ್ಷರಾಗಿ ಆಯ್ಕೆಯಾದರು.
ಉಪಾಧ್ಯಕ್ಷೀಯ ಚುನಾವಣೆಯಲ್ಲಿ ಭಾಗ್ಯಮ್ಮ ಮತ್ತು ಲಕ್ಷ್ಮಮ್ಮ ನಾಮಪತ್ರ ಸಲ್ಲಿಸಿದ್ದು, ಭಾಗ್ಯಮ್ಮ ಅವರು 12 ಮತ ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಲಕ್ಷ್ಮಮ್ಮ ಅವರು 8 ಮತಗಳನ್ನು ಪಡೆದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಪಿಡಿಒ ಗಂಗಬೈರಪ್ಪ, ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿಗಳಿದ್ದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸಮೂರ್ತಿ ಮತ್ತು ಉಪಾಧ್ಯಕ್ಷರಾದ ಭಾಗ್ಯಮ್ಮ ಅವರಿಗೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಮೆಳೇಕೋಟೆ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷರಾದ ಶ್ವೇತಾ ಮುನಿಶಾಮಿ ಗೌಡ, ಪ್ರೀತಿ ಗೌರೀಶ್, ಸದಸ್ಯರುಗಳಾದ ಬೈರೇಗೌಡ, ಮುನೇಗೌಡ, ರಾಜಘಟ್ಟ ಗ್ರಾಪಂ ಮಾಜಿ ಅಧ್ಯಕ್ಷ ಹರೀಶ್, ಉದ್ಯಮಿ ಸಂದೀಪ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷ ಜಗನ್ನಾಥ, ಜೆಡಿಎಸ್ ಮುಖಂಡರಾದ ಚಿಕ್ಕಪ್ಪಯ್ಯ, ಗೌರೀಶ್, ಮುರುಳಿ, ಶ್ರೀನಿವಾಸ್ ಶೆಟ್ಟರ್, ಉದಯ ಆರಾಧ್ಯ, ನಂದೀಶ್ ಮತ್ತಿತರರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….