ಸರ್ಕಾರದ ಯೋಜನೆಗಳು ತ್ವರಿತವಾಗಿ ಜನರಿಗೆ ತಲುಪುವಂತೆ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ಬೆಂ.ಗ್ರಾ.ಜಿಲ್ಲೆ, (ಜುಲೈ.26): ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆ ಹಾಗೂ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಹಾಗೂ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭ ಮಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಹೇಳಿದರು.

ಅನ್ನ ಭಾಗ್ಯ ಯೋಜನೆ ಅಡಿ 231009 ಫಲಾನುಭವಿಗಳಿದ್ದು ಅದರಲ್ಲಿ 170329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು  ಜುಲೈ ಮಾಹೆಯಲ್ಲಿ  ಜಮೆಯಾಗಿದೆ. ಉಳಿದಂತೆ  ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ  ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ  ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆಯಾಗಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 4,91,028 ಕುಟುಂಬಗಳು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,41,262 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ ಉಳಿದಂತೆ ಇನ್ನೂ ನೊಂದಾಯಿಸಿಕೊಳ್ಳದ ಕುಟುಂಬಗಳಿಗೆ ಮಾಹಿತಿ ನೀಡಿ ಶೀಘ್ರ ನೋಂದಾಯಿಸುವಂತೆ  ಕ್ರಮ ಕೈಗೊಳ್ಳಿ ಎಂದರು.

ಗೃಹಲಕ್ಷ್ಮಿ ಯೋಜನೆ ಅಡಿ ಜಿಲ್ಲೆಯಲ್ಲಿ ಜುಲೈ 20 ರಿಂದ ಜುಲೈ 24ರ ವರೆಗೆ 46903 ಫಲಾನುಭವಿಗಳು ನೋಂದಣಿ ಆಗಿರುತ್ತಾರೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ,ಮಾಹಿತಿ ನೀಡಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.

ಪೋಡಿ,11-ಇ ಸ್ಕೆಚ್, ಹದ್ದುಬಸ್ತು, ಮೋಜಣಿದಾರರ ಅಳತೆ ಪ್ರಕರಣಗಳ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸಿ ಸರ್ಕಾರಿ ಭೂಮಾಪಕರು ಹಾಗೂ ಖಾಸಗಿ ಭೂಮಾಪಕರ ಒಳಗೊಂಡಂತೆ ಶೀಘ್ರ ಕ್ರಮವಹಿಸಿ ನಿರ್ದಿಷ್ಟ ಕಾಲಮಿತಿಯೊಳಗೆ ಸರ್ವೆ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದರು.

ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಒಂದು ಘನತ್ಯಾಜ್ಯ ವಿಲೇವಾರಿ ಘಟಕವಿರಬೇಕು ಪ್ರತಿಯೊಂದು ಗ್ರಾಮದಲ್ಲೂ ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳು ಹಾಗೂ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರಲ್ಲದೆ ಈ ಇಲಾಖೆ ಅಡಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ಸೂಕ್ತ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ಕೊಡಬೇಕು. ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆ, ಕಾಲೇಜು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ ಇಲಾಖೆಯ ಬೆಳೆಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರಲ್ಲದೆ ರೈತರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ನೀಡಿ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿ ಬಾಕಿ ಇರುವ ರಸ್ತೆ , ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ನರೇಗಾ ಯೋಜನೆಯಡಿ ಇಲಾಖೆಗಳಲ್ಲಿ  ಬಾಕಿ ಇರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ. ಶೇಕಡಾವಾರು ಪ್ರಗತಿ ಕಡಿಮೆ ಸಾಧಿಸಿರುವ ಇಲಾಖೆಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿ ವರದಿ ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!