DBPura; ಚನ್ನದೇವಿಅಗ್ರಹಾರ ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ವೇಳೆ ಹೈಡ್ರಾಮ..!: ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಅಭ್ಯರ್ಥಿ..!!

ದೊಡ್ಡಬಳ್ಳಾಪುರ, (ಜುಲೈ.26): ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಮಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ನಾಮಪತ್ರಸಲ್ಲಿಸದೇ ಹೋದರೆ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ JDS ಬೆಂಬಲಿತ ಬಂಡಾಯ ಅಭ್ಯರ್ಥಿಗೆ ಕಾಂಗ್ರೆಸ್ ಹಾಗೂ BJP ಬೆಂಬಲಿತ ಸದಸ್ಯರು ಬೆಂಬಲ ನೀಡಿ ವಿಜೇತರನ್ನಾಗಿಸಿದ್ದಾರೆ.

ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಮಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಅಧಿಕಾರಿ PWD ಇಲಾಖೆಯ ಜಯಪ್ರಕಾಶ್ ನೇತೃತ್ವದಲ್ಲಿ ಚುನಾವಣೆ ನಡೆಸಲಾಯಿತು.

12 ಮಂದಿ ಸದಸ್ಯ ಬಲದ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಮಹಿಳೆ) ಮೀಸಲಾಗಿತ್ತು. ಆದರೆ ಈ ಮೀಸಲು ಅಡಿಯಲ್ಲಿ ಇದ್ದ ಏಕಮಾತ್ರ ಮಹಿಳಾ ಸದಸ್ಯೆ ನಾಮಪತ್ರ ಸಲ್ಲಿಸದೆ ಉಳಿದಿದ್ದು ಅಚ್ಚರಿಗೆ ಕಾರಣವಾಯಿತು.

ಇನ್ನು ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ಅರವಿಂದ ಮತ್ತು ಕಾಂತಲಕ್ಷ್ಮೀ ಎನ್ನುವವರು ನಾಮಪತ್ರ ಸಲ್ಲಿಸಿದ್ದು, ಕಾಂತಲಕ್ಷ್ಮೀ 05 ಮತಗಳನ್ನು ಪಡೆದರೆ, 07 ಮತಗಳನ್ನು ಪಡೆದು ಅರವಿಂದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಅರವಿಂದ್ ಅವರನ್ನು ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಥಿಕಾರದ ಮಾಜಿ ನಿರ್ದೇಶಕ ಆನಂದ್‌ಮೂರ್ತಿ, ಗ್ರಾಪಂ ಸದಸ್ಯರಾದ ಸುಧಾ ಡಿ.ಮಂಜುನಾಥ್, ಪ್ರಮಿಳ, ಜಗದೀಶ್, ಪ್ರೇಮಕುಮಾರಿ, ಮಂಜುನಾಥ್, ತಾಪಂ‌ ಮಾಜಿ ಅಧ್ಯಕ್ಷ ಮಂಗಳಮ್ಮ ಶಂಕರಪ್ಪ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ ಮಲ್ಲೋಹಳ್ಳಿ ಮತ್ತಿತರರು ಅಭಿನಂದನೆ ಸಲ್ಲಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!