ದೊಡ್ಡಬಳ್ಳಾಪುರ, (ಆ.04): ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ.
ಇಂದು ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಅಧಿಕಾರಿ ದಾಕ್ಷಾಯಿಣಿ, ಸಹಾಯಕ ಚುನಾವಣೆ ಅಧಿಕಾರಿ ಪಿಡಿಒ ರವೀಂದ್ರ ಸಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
18 ಮಂದಿ ಸದಸ್ಯತ್ವ ಬಲದ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ವಿಜಯಕುಮಾರ್, ಗಿರೀಶ್ ಹಾಗೂ ಬೈರೇಗೌಡ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಮ್ಮ, ಗಂಗಮ್ಮ ಅವರು ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬೈರೇಗೌಡ ಅವರು ನಾಮಪತ್ರ ಹಿಂಪಡೆದಿದ್ದು, ಗಿರೀಶ್ ಅವರು 07 ಮತಗಳನ್ನು ಪಡೆದರೆ, ವಿಜಯ ಕುಮಾರ್ ಅವರು 11 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು.
ಇನ್ನೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಗಂಗಮ್ಮ 07 ಮತಗಳನ್ನು ಪಡೆದರೆ, ಲಕ್ಷ್ಮಮ್ಮ 11ಮತಗಳನ್ನು ಪಡೆದು ಆಯ್ಕೆಯಾದರು.
ಚುನಾವಣೆ ಪ್ರಕ್ರಿಯೆಯಲ್ಲಿ 18 ಮಂದಿ ಗ್ರಾಮಪಂಚಾಯಿತಿ ಸದಸ್ಯರು ಹಾಜರಾಗಿದ್ದರು.
ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ್ ಮತ್ತು ಲಕ್ಷ್ಮಮ್ಮ ಅವರನ್ನು ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮತ್ತಿತರರು ಅಭಿನಂದನೆ ಸಲ್ಲಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….