ನಾನು ಪ್ರವಾಸ ಹೋಗಿದ್ದು ಯುರೋಪಿಗೆ, ಸಿಂಗಾಪುರಕ್ಕೆ ಅಲ್ಲ: ಪ್ರವಾಸದಿಂದ ಮರಳುತ್ತಿದ್ದಂತೆ ಸರ್ಕಾರದ ವಿರುದ್ಧ ಮುಗಿ ಬಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, (ಆ.04): ವಿದೇಶ ಪ್ರವಾಸದಿಂದ ಹಿಂದಿರುಗಿದ ತಕ್ಷಣದಿಂದಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮೀಷನ್ ಸಂಗ್ರಹದ ಬಗ್ಗೆ ಗುರುತರ ಆರೋಪಗಳನ್ನು ಮಾಡಿದ್ದಾರೆ.

ಕಳೆದ ರಾತ್ರಿ ಅವರು ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬಂದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

ಕಾಂಗ್ರೆಸ್ ಪಕ್ಷ ಈಸ್ಟ್ ಇಂಡಿಯಾ ಪಕ್ಷದಂತೆ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್ ಟಿ ದಂಧೆಕೋರರು ಶಾಮೀಲಾಗಿದ್ದಾರೆ, ಬಿಡಿಎ ಅಧಿಕಾರಿಗಳಿಂದ 250 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಲಾಗಿದೆ ಎಂಬುದು ಮಾಜಿ ಮುಖ್ಯಮಂತ್ರಿ ಅವರು ಮಾಡಿರುವ ಗಂಭೀರ ಆರೋಪಗಳು.

ದುಡ್ಡಿದ್ದರೆ ಮನೆ ಒಳಕ್ಕೆ ಬನ್ನಿ ಎನ್ನುವ ಸಚಿವರ ಚೇಲಾಗಳು: ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮೀಷನ್ ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಆ ಸಚಿವರ ಚೇಲಾಗಳು ತಾಕೀತು ಮಾಡಿದ್ದಾರೆ. ಇವರು ಹೋಗಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಅವರಿಗೆ ಹೇಳುತ್ತಾರೆ!! ಇಂಥವರಿಂದ ರಾಜ್ಯದ ಉದ್ಧಾರ ಸಾಧ್ಯವೇ? ಪಾರದರ್ಶಕ ಆಡಳಿತ ನೀಡಲು ಆಗುತ್ತದೆಯೇ? ಎಂದು ಅವರು ಪ್ರಶ್ನಿಸಿದರು.

250 ಕೋಟಿಗೆ ಡಿಮ್ಯಾಂಡ್: ಬಿಡಿಎ ಅಧಿಕಾರಿಗಳಿಂದಲೂ ಹಣಕ್ಕೆ ಬೇಡಿಕೆ ಇಡಲಾಗಿದೆ. ದಿಲ್ಲಿಗೆ ಈ ಹಣ ಕಲಿಸಬೇಕು, ಕೊನೆಪಕ್ಷ 250 ಕೋಟಿ ರೂಪಾಯಿ ಕಲೆಕ್ಷನ್ ಆಗಬೇಕು ಎಂದು ಅಧಿಕಾರಿಗಳಿಗೆ ಒಬ್ಬರು ಮಹಾನುಭಾವರು ತಾಕೀತು ಮಾಡುತ್ತಾರೆ. ದುಡ್ಡು ಯಾರಿಗೆ ಸೇರಬೇಕು ಅವರ ಪಟ್ಟಿ ಕೊಡುತ್ತೇವೆ, ಅವರಿಗೆ ನೇರವಾಗಿ ದುಡ್ಡು ತಲುಪಿಸಿ ಎಂದು ಹೇಳುತ್ತಾರಂತೆ. ನಾನು ಯುರೋಪ್ ನಲ್ಲಿ ಇದ್ದಾಗಲೇ ಈ ಬಗ್ಗೆ ಮಾಹಿತಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಅವರು ಚಾಟಿ ಬೀಸಿದರು.

ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಈಸ್ಟ್ ಇಂಡಿಯಾ ಕಂಪನಿಯಂತೆ ಲೂಟಿ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ತುಪ್ಪ ಸವರಿ ವರ್ಗಾವಣೆ ದಂಧೆಯಲ್ಲಿ ಕೊಳ್ಳೆ ಹೊಡೆಯುತ್ತಿದೆ. ಬೆಂಗಳೂರನ್ನು ಸಿಂಗಾಪುರ ಮಾಡುತ್ತೇವೆ ಎಂದು ಹೇಳಿದವರು ಇವತ್ತು ಇದೇ ಬೆಂಗಳೂರನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಹೊರನೋಟಕ್ಕೆ ಭ್ರಷ್ಟಾಚಾರವನ್ನು ತೊಡೆದು ಹಾಕುವ ಮಾತು ಹೇಳುತ್ತಿದ್ದಾರೆ. ನಿಜಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಂತಹ ಮನಃಸ್ಥಿತಿ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ವಸೂಲಿಗೆ ಆ ಪಕ್ಷ ಇರೋದು. ಈಸ್ಟ್ ಇಂಡಿಯಾ ಕಂಪನಿ ಇಡೀ ದೇಶವನ್ನು ಇವರಿಗೆ ಕೊಟ್ಟು ಹೋದರು. ಈಸ್ಟ್ ಇಂಡಿಯಾ ಕಂಪನಿಯ ವಸೂಲಿಯನ್ನ ಕಾಂಗ್ರೆಸ್ ಮುಂದುವರಿಸಿಕೊಂಡು ಬಂದಿದೆ. ಇಂಥವರು ಭ್ರಷ್ಟಾಚಾರ ನಿಲ್ಲಿಸ್ತಾರಾ? ಎಂದು ಅವರು ಪ್ರಶ್ನಿಸಿದರು.

ಗೃಹ ಇಲಾಖೆಯಲ್ಲಿ ವೈಎಸ್ ಟಿ ಟ್ಯಾಕ್ಸ್ ದಂಧೆಕೋರರು: ಗೃಹ ಇಲಾಖೆಯಲ್ಲಿ ವರ್ಗಾವಣೆಯ ದಂಧೆ ಬಗ್ಗೆ ಕೇಳಿ ನನಗೆ ತೀವ್ರ ಆಘಾತ ಉಂಟಾಯಿತು. ಪೊಲೀಸರನ್ನು ಹೀಗೆ ಬಳಕೆ ಮಾಡಿಕೊಂಡರೆ ಕಾನೂನು ಸುವ್ಯವಸ್ಥೆ ಕಾಪಾಡುವ ಅವರು ಇನ್ನೇನು ಕೆಲಸ ಮಾಡುತ್ತಾರೆ? ಬ್ರಿಗೇಡ್ ರಸ್ತೆ ಸಮೀಪ ಇರುವ, ಗರುಡಾ ಮಾಲ್ ಹತ್ತಿರದ ಪೊಲೀಸ್ ಮೆಸ್ ನಲ್ಲಿ ನಡೆದ ಸಭೆಯಲ್ಲಿ ಯಾರೆಲ್ಲಾ ಇದ್ದರು? ವೈಎಸ್ ಟಿ ಟ್ಯಾಕ್ಸ್ ಬಾಬ್ತುನವರು ಅಲ್ಲೇ ಇದ್ದರಲ್ಲವೇ? ಪೊಲೀಸ್ ವರ್ಗಾವಣೆ ಸಂಬಂಧ ನಡೆದ ಈ ಸಭೆಯಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳ ಜತೆಗೆ ಈ ವೈಎಸ್ ಟಿ ಟ್ಯಾಕ್ಸ್ ಕುಳಗಳನ್ನು ಕೂರಿಸಿಕೊಂಡು ಚರ್ಚೆ ಮಾಡಿದ್ದೇಕೆ? ಪೊಲೀಸ್ ಇಲಾಖೆಯ ಸಭೆಯಲ್ಲಿ ಅವರಿಗೇನು ಕೆಲಸ? ಅವರನ್ನು ಒಳಕ್ಕೆ ಬಿತ್ತುಕೊಂಡವರು ಯಾರು? ಎಂದು ಕುಮಾರಸ್ವಾಮಿ ಅವರು ನೇರವಾಗಿ ಪ್ರಶ್ನಿಸಿದರು.

ಭ್ರಷ್ಟಾಚಾರದ ರಿಪೋರ್ಟ್ ಕಾರ್ಡು ಕೊಡಲು ಹೋಗಿರಬೇಕು: 36 ಜನ ಮಂತ್ರಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು. ಅವರ ಹೈಕಮಾಂಡಿಗೆ ರಿಪೋರ್ಟ್ ಕಾರ್ಡು ಕೊಡೋದಕ್ಕೆ ಅವರು ಹೋಗಿದ್ದರಂತೆ. ಅವರು ರಿಪೋರ್ಟ್ ಕಾರ್ಡ್ ಇಡಬೇಕಿರುವುದು ರಾಜ್ಯದ ಆರೂವರೆ ಕೋಟಿ ಜನತೆಯ ಮುಂದೆ ಹೊರತು ಹೈಕಮಾಂಡ್ ಮುಂದೆ ಅಲ್ಲ. ಈ ರಾಜ್ಯದ ಜನರು ವೋಟು ಹಾಕಿ ಇವರನ್ನು ಗೆಲ್ಲಿಸಿದ್ದಾರೆ. ನಾವೇನು ಮಾಡಿದ್ದೇವೆ, ಮಾಡುತ್ತೇವೆ ಎನ್ನುವ ವರದಿಯನ್ನು ಈ ಜನರ ಮುಂದೆ ಇಡಬೇಕು. ಇವರೇನು ಭ್ರಷ್ಟಾಚಾರದ ರಿಪೋರ್ಟ್ ಕಾರ್ಡು ಕೊಡಲು ಹೋಗಿರಬೇಕು ಎಂದು ಅವರು ತರಾಟೆಗೆ ತೆಗೆದುಕೊಂಡರು.

ಇವರು ಲೂಟಿ ಮಾಡುವುದಕ್ಕೆ ಖಜಾನೆ ಖಾಲಿ ಎಂದು ತೋರಿಸುವ ಹುನ್ನಾರ ನಡೆಸಿದ್ದಾರೆ. ಗ್ಯಾರಂಟಿ ಗೊಂದಲ ಮಾಡಿಕೊಂಡು, ವಿಧಾನಸಭೆ ಕ್ಷೇತ್ರಗಳಿಗೆ ಹಣ ಇಲ್ಲ ಎನ್ನುವ ಸಬೂಬು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ಖಜಾನೆ ಸಮೃದ್ಧವಾಗಿದೆ. ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ನನಗೆ ನಿಜಕ್ಕೂ ಆಶ್ಚರ್ಯ ಆಗುತ್ತಿದೆ ಎಂದು ಅವರು ಹೇಳಿದರು.

ಹಣಕಾಸು ಬಗ್ಗೆ ಶ್ವೇತಪತ್ರ ಹೊರಡಿಸಿ: ಗ್ಯಾರಂಟಿಗಳಿಗೆ 20ರಿಂದ 25 ಸಾವಿರ ಕೋಟಿ ರೂಪಾಯಿ ಸಾಕು. ಕಳೆದ ವರ್ಷ 40,000 ಕೋಟಿ ರೂಪಾಯಿ ಹೆಚ್ಚುವರಿ ತೆರಿಗೆ ಆದಾಯ ಬಂದಿದೆ. ತೆರಿಗೆಯ ಎಲ್ಲಾ ಬಾಬ್ತುಗಳಲ್ಲಿ ನಿರೀಕ್ಷೆಗೂ ಮೀರಿ ತೆರಿಗೆ ಸಂಗ್ರಹ ಆಗಿದೆ. ಹಾಗಾದರೆ ಹದಿನಾಲ್ಕು ಬಜೆಟ್ ಮಂಡಿಸಿದ ಮಹಾನುಭಾವರು ಕೊರತೆ ಬಜೆಟ್ ಮಂಡಿಸಿದ್ದು ಯಾಕೆ? ಅದರ ಹಿಂದಿನ ಹುನ್ನಾರ ಏನು ಅವರು ಕೇಳಿದರು.

ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ದೊಡ್ಡ ನಾಟಕ ನಡೆಯುತ್ತಿದೆ. ಒಂದು ಕಡೆ ಸಾಲ ಪ್ರಮಾಣ ಹೆಚ್ಚಳ ಮಾಡಿಕೊಂಡಿದ್ದಾರೆ, ಇನ್ನೊಂದು ತೆರಿಗೆ ಸಂಗ್ರಹದಲ್ಲಿ ಗುರಿ ಮೀರಿದ ಸಾಧನೆ ಆಗಿದೆ. ಕೇಂದ್ರ ಸರಕಾರದಿಂದಲೂ ಯಾವುದೇ ಬಾಕಿ ಇಲ್ಲ. ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಲು 25,000 ಕೋಟಿ ರೂಪಾಯಿ ನೀಡಿದ್ದೆ. ಅಭಿವೃದ್ಧಿ ಎಲ್ಲೂ ನಿಲ್ಲಲಿಲ್ಲ, ಶಾಸಕರ ಅನುದಾನಕ್ಕೆ ಕೂಡ ಕತ್ತರಿ ಬೀಳಲಿಲ್ಲ. ಅವರ ಭಾಗ್ಯಗಳಿಗೂ ಹಣ ನೀಡಿದೆ. ಎಲ್ಲವನ್ನೂ ಜನರ ಮುಂದೆ ಇಡಿ. ನಿಮಗೆ ಧೈರ್ಯ ಇದ್ದರೆ ಶ್ವೇತಪತ್ರ ಹೊರಡಿಸಿ ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದರು.

ಡಿಕೆಶಿಗೆ ಟಾಂಗ್ ಕೊಟ್ಟ ಮಾಜಿ ಮುಖ್ಯಮಂತ್ರಿ: ನಾನು ಪ್ರವಾಸ ಹೋಗಿದ್ದು ಯುರೋಪ್ ದೇಶಗಳಿಗೆ. ನನ್ನ ಕುಟುಂಬ ಸದಸ್ಯರು, ಸಹೋದರ, ಸಹೋದರಿಯರ ಜತೆ ತೆರಳಿದ್ದೆ. ಆದರೆ ಇಲ್ಲಿ ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗಿ ಸರಕಾರ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ವದಂತಿ ಹಬ್ಬಿಸಿದರು. ಇದು ನಮ್ಮ ರಾಜ್ಯದ ಬೇಹುಗಾರಿಕೆ ಇಲಾಖೆ ಕೆಲಸ ಮಾಡುತ್ತಿರುವ ರೀತಿ ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕೇವಲ 19 ಕ್ಷೇತ್ರ ಗೆದ್ದಿರುವ ಕುಮಾರಸ್ವಾಮಿ ಬಗ್ಗೆ 136 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಭಯವಿದೆ. ಅವರಿಗೆ ಬಹುಮತ ಇದ್ದರೂ ಸುಸ್ಥಿರ ಸರಕಾರ ನೀಡಲು ಸಾಧ್ಯವಿಲ್ಲ. ಅವರು ಅಭದ್ರತೆಯ ಭಾವದಿಂದ ಬಳಲುತ್ತಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಡಿಕೆ ಶಿವಕುಮಾರ್ ಅವರು ಯಾಕೆ ಈ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರಿಗೆ ಈ ಸರಕಾರ ಪೂರ್ಣಾವಧಿಗೆ ಇರುತ್ತದೆ ಎನ್ನುವ ನಂಬಿಕೆ ಇದ್ದಂತೆ ಇಲ್ಲ. ಅವರು ಹೆಚ್ಚಾಗಿ ಶಾಸ್ತ್ರ ಜ್ಯೋತಿಷ್ಯ ಕೇಳುತ್ತಾರೆ, ಜ್ಯೋತಿಷ್ಯದ ಮೂಲಕ ಚುನಾವಣೆಗಾಗಿ ಕೃತಕವಾದ ಶಕ್ತಿ ತುಂಬಿಕೊಂಡಿದ್ದಾರೆ, ಆ ಶಕ್ತಿ ಬಹಳ ದಿನ ಇರೋದಿಲ್ಲ ಅನ್ನುವುದು ಅವರಿಗೆ ತಲೆ ಒಳಗೆ ಇರಬಹುದು. ಅದಕ್ಕೆ ಅವರು ಈ ಹೇಳಿಕೆ ಕೊಟ್ಟಿರಬಹುದು ಎಂದು ಅವರು ಟಾಂಗ್ ಕೊಟ್ಟರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!