ತಾಕತ್ತಿದ್ದರೆ ದೇಶದ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ, (ಆ.08): ಬಿಜೆಪಿಗೆ ತಾಕತ್ತಿದ್ದರೆ ಐದು  ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು  ಮಾಡಲಿ  ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.  

ಅಪನಂಬಿಕೆ ಬೇಡ: 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ.  ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ.  ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ.  ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು.  ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ  ಅನ್ಯಾಯ ಮಾಡಿದ್ದು ಬಿಜೆಪಿ ಸರ್ಕಾರ  ಎಂದರು.

ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ: ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದ್ದು ಭಾಜಪ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಹೊಟ್ಟೆಉರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ.

ಬಡತನ ಹಿಂಸೆಯ ಅತಿ ಕೆಟ್ಟ ರೂಪ: ವಿರೋಧ ಪಕ್ಷದವರು ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆಯೂ ಗುಲ್ಲೆಬ್ಬಿಸಿದರು. ¨ಡವರ ವಿರೋಧಿ ಸರ್ಕಾರ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಾಗಿ ಮೊದಲು ಒಪ್ಪಿಗೆ ನೀಡಿ,  ನಂತರ ಅಕ್ಕಿ ಕೊಡದೇ ರಾಜಕೀಯ ಮಾಡಿದರು. ರೂ. 34 ರಂತೆ ಹಣ ಕೊಡುತ್ತೇವೆ ಎಂದರೂ ಅವರು ಬಡವರಿಗೆ 5 ಕೆಜಿ ಅಕ್ಕಿಯನ್ನು ನೀಡಲಿಲ್ಲ. ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದರು. ದೇಶದಲ್ಲಿ ಅಸಮಾನತೆ ಇದೆ, ಬಡತನ ಹಾಗೂ ಶ್ರೀಮಂತಿಕೆ ಇದೆ. ಇದನ್ನು  ಹೋಗಲಾಡಿಸುವ ಕೆಲಸ ನಾವು ಮಾಡಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ನಾವು ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬೆಲೆಏರಿಕೆಯ ಮೂಲಕ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ ಎಂದು ಮುಖ್ಯಮಂತ್ರಿಗಳು  ವಿರೋಧಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ ಎಂದರು. ಕಲಂ 371 ಜೆ ಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ  ಲಾಲ್ ಕೃಷ್ಣ ಅಡ್ವಾಣಿಯವರು ಹೇಳಿದ್ದರು. ಅದನ್ನು ಕಾಂಗ್ರೆಸ್ ಸರ್ಕಾರ ಮಾಡಿ ತೋರಿಸಿದೆ. ಎಂದರು.

ಮಾತಿಗೆ ತಪ್ಪುವುದಿಲ್ಲ: ಕರ್ನಾಟಕ  ಸರ್ಕಾರ ಎಂದಿಗೂ ಮಾತಿಗೆ ತಪ್ಪುವುದಿಲ್ಲ.  ಕಾಂಗ್ರೆಸ್  ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅವರ ಮೂಲಕ ಹೇಳಿಸಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳು ಹಾಗೂ ಬಜೆಟ್ ನಲ್ಲಿ ಹೇಳಿರುವ ಯೋಜನೆಗಳನ್ನು  ಜಾರಿ ಮಾಡದೇ ಇರುವುದಿಲ್ಲ ಎಂದು ಭರವಸೆಯಿತ್ತರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ  ಪ್ರಿಯಾಂಕ ಖರ್ಗೆ, ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಶರಣಪ್ರಕಾಶ ಪಾಟೀಲ್ ದರ್ಶನಾಪುರ್, ಶಾಸಕರಾದ ಅಲ್ಲಂಪ್ರಭು, ಕನೀಜ್ ಫಾತಿಮಾ, ಬಿ.ಆರ್.ಪಾಟೀಲ್, ಎಂ.ವೈ ಪಾಟೀಲ್ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ

[ccc_my_favorite_select_button post_id="120922"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]