ದೊಡ್ಡಬಳ್ಳಾಪುರ, (ಆ.09): ಟೊಮೆಟೊ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಗುದ್ದಿರುವ ಪರಿಣಾಮ, ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ನಗರದ ಹೊರವಲಯದ ಯಲಹಂಕ – ಹಿಂದೂಪುರ ರಾಜ್ಯ ಹೆದ್ದಾರಿ ಪಾಲನಜೋಗಿಹಳ್ಳಿ ಬಳಿ ಸಂಭವಿಸಿದೆ.
ಬೆಂಗಳೂರು ಮೂಲದ ಮೂವರು ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಮುಗಿಸಿ ಹಿಂತಿರುಗುವುವ ವೇಳೆ, ಪಾಲನಜೋಗಿಹಳ್ಳಿ ರಸ್ತೆಯಲ್ಲಿನ HAJ ಚಿಕನ್ ಸೆಂಟರ್ ಸಮೀಪ ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಏಕಾಏಕಿ ಗುದ್ದಿದೆ.
ಪರಿಣಾಮ ಕಾರು ತೀವ್ರ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಅಳವಡಿಸಲಾಗಿದ್ದ ಏರ್ ಬ್ಯಾಗ್ ಓಪನ್ ಆದ ಪರಿಣಾಮ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಇನ್ನೂ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಮುನಿಕೃಷ್ಣ ಹಾಗೂ ಸಿಬ್ಬಂದಿ ದೌಡಾಯಿಸಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….