ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, (ಆ.12): ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಕರ್ನಾಟಕ ರಾಜ್ಯ ವಕೀಲರ  ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು. 

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ: ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತ ವಾದ ನ್ಯಾಯದಾನ ನೀಡಲು ಸಾಧ್ಯ ಎಂದು ತಿಳಿಸಿದರು.

ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು: ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ. ಅದಕ್ಕೂ ಮುನ್ನ ರಾಜಮಹಾರಾಜರು ನ್ಯಾಯ ತೀರ್ಮಾನ ಮಾಡುತ್ತಿದ್ದರು. ಅವರ ತೀರ್ಮಾನ ಮನುವಾದದ ರೀತಿಯ ಮೇಲೆ ತೀರ್ಮಾನವಾಗುತ್ತಿದ್ದವು. ಜಾತಿ ವ್ಯವಸ್ಥೆ ಬಲವಾಗಿದ್ದುದರಿಂದ ಒಂದೇ ರೀತಿಯ ತಪ್ಪಿಗೆ ಬೇರೆ ಬೇರೆ ಶಿಕ್ಷೆಗಳಿದ್ದವು. ಶ್ರೀಮಂತರಿಗೆ, ಮೇಲ್ಜಾತಿಯವರಿಗೆ, ಕೆಲವರ್ಗದವರಿಗೆ, ಬಡವರಿಗೆ  ಬೇರೆ ರೀತಿಯ ಶಿಕ್ಷೆ ಆಗುತ್ತಿತ್ತು. ಸಂವಿಧಾನ ಬಂದ ನಂತರ ಆರ್ಟಿಕಲ್ 14 ರಲ್ಲಿ  Equality before Law, Equal Protection of Law ಎಂದು ಒಪ್ಪಿಕೊಂಡಿದ್ದೇವೆ. ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು ಎಂದರು.

ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ: ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ.  ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು. ಸಂವಿಧಾನ ಎಲ್ಲರಿಗೂ ಅವಕಾಶ ದೊರೆತಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ ಎಂದು ಮುಖ್ಯ ಮಂತ್ರಿಗಳು ಸ್ಮರಿಸಿದರು. 

ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ: ಎಲ್ಲಾ ಮೇಲ್ವರ್ಗದವರೇ ವಕೀಲರಾಗಿದ್ದರು. ಕೆಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ ಎಂದರು.

ಶಾನುಭೋಗರೊಬ್ಬರು ಮಗನನ್ನು ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. 

ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವನ್ನು ವಿರೋಧಿಸುವವರೂ ಇದ್ದಾರೆ ಸಮಾಜದಲ್ಲಿ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳ ತಲೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. 

ಎಳೆ ವಯಸ್ಸಿನಲ್ಲಿ ಸಂವಿಧಾನದ ವಿರುದ್ಧ ದಾರಿತಪ್ಪಿಸುತ್ತಾರೆ.  ಬಡವರಿಗೆ , ದಲಿತರಿಗೆ, ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು. ಸಂವಿಧಾನದ ವಿರುದ್ಧ ಇರುವವರಿಂದ ನ್ಯಾಯ, ಬಡವರಿಗೆ ರಕ್ಷಣೆ ಸಿಗಲು ಸಾಧ್ಯವೇ? ಈ ಬಗ್ಗೆ ಗಂಭೀತವಾಗಿ ಚರ್ಚೆ ಮಾಡಬೇಕಿದೆ. ಇಂಥ ಸಮಾವೇಶ ಗಳನ್ನು  ಮಾಡುವಾಗ ಈ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]