ಸ್ವಾತಂತ್ರ್ಯ ಹೋರಾಟಗಾರರು ಭಾರತೀಯರಿಗೆ ಸದಾ ಸ್ಪೂರ್ತಿ: ಡಿ.ಶ್ರೀಕಾಂತ್

ದೊಡ್ಡಬಳ್ಳಾಪುರ, (ಆ.12): ಸ್ವಾತಂತ್ರ್ಯ ಹೋರಾಟಗಾರರು ಸರಳತೆ, ಸಜ್ಜನಿಕೆ, ಮಾನವೀಯ ಮೌಲ್ಯಗಳನ್ನು  ತಮ್ಮ ಬದುಕಿನಲ್ಲಿ ರೂಢಿಸಿಕೊಂಡಿದ್ದರು.  ಆದರ್ಶವಾದ ಜೀವನಶೈಲಿ ಹೊಂದಿದ್ದ  ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಎಂದಿಗೂ ಭಾರತೀಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ಅವರು ನಗರದ ಎಂಎಬಿಎಲ್ ಪ್ರೌಢಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರು ಎಂಬ ವಿಷಯ ಕುರಿತು ಮಾತನಾಡಿದರು.  ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಸಿದ್ದಲಿಂಗಯ್ಯ, ಎಚ್.ಮುಗುವಾಳಪ್ಪ, ರುಮಾಲೆ ಚನ್ನಬಸವಯ್ಯ, ರುಮಾಲೆ ಭದ್ರಣ್ಣ, ನಾ.ನಂಜುಂಡಯ್ಯ, ದಾನಪ್ಪ  ಮುಂತಾದವರು ರಾಜ್ಯಮಟ್ಟದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಶಿವಪುರದ ಧ್ವಜ ಸತ್ಯಾಗ್ರಹ, ವಿಧುರಾಶ್ವತ್ಥ ಹತ್ಯಾಕಾಂಡ  ಸೇರಿದಂತೆ ಹಲವು ಹೋರಾಟದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು ಎಂದರು. 

ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಸುಭಾಷ್ ಚಂದ್ರಬೋಷ್ ಅವರು ಬೆಂಬಲ ನೀಡಿದ್ದರು.  ನಂದಿಬೆಟ್ಟಕ್ಕೆ ವಿಶ್ರಾಂತಿಗಾಗಿ ಬಂದಿದ್ದ ಮಹಾತ್ಮಗಾಂಧಿ ಮತ್ತು ಸರ್ಧಾರ್ ವಲ್ಲಭಾಯ್ ಪಟೇಲ್ ಅವರನ್ನು ದೊಡ್ಡಬಳ್ಳಾಪುರಕ್ಕೆ ಕರೆತಂದಿದ್ದರು.

ಮಹಾತ್ಮಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದು ಸಭೆ ನಡೆಸಿದ ಸ್ಥಳವನ್ನು ಗಾಂಧಿನಗರವೆಂದು ಹೆಸರಿಡಲಾಗಿದೆ. ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ  ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ನಾವು ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕಾಗಿದೆ. ನಮ್ಮೂರಿನ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕು.  ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಹಿರಿಯರನ್ನು ಸ್ಮರಿಸಬೇಕೆಂದರು. 

ಕನ್ನಡ ಮನಸ್ಸುಗಳು ಮತ್ತು ಅಮೃತಹಸ್ತ ಸಂಘಟನೆಯ ಚೈತ್ರ ಮಾತನಾಡಿ,  ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹೆಮ್ಮೆ, ಪ್ರತಿಷ್ಠೆ, ಗೌರವ ಮತ್ತು ಹೆಮ್ಮೆಯನ್ನು ಯಾವಾಗಲೂ ಕಾಪಾಡಿಕೊಳ್ಳಬೇಕು.  ಭಾರತದ ತ್ರಿವರ್ಣ ಧ್ವಜವು ಭಾರತದ ಹೆಮ್ಮೆಯಾಗಿದೆ.  ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು.  ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆ ಪಡೆದುಕೊಳ್ಳಬೇಕು ಎಂದರು.

ಕಾರ್ಯ ಕ್ರಮದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಎಲ್.ಅನ್ನಪೂರ್ಣ, ಎಂ.ಮೃದುಲ, ಡಿ.ಜಿ.ಮನಸ್ವಿನಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಶ್ರೀ ವಿದ್ಯಾ ಜಾಗೃತಿ ಟ್ರಸ್ಟ್ ಗೌರವ ಕಾರ್ಯದರ್ಶಿ ಎಂ.ಬಿ.ಗುರುದೇವ್,  ಸಿಇಒ  ಬಿ.ಪಿ.ಪ್ರಿಯಾಂಕ, ಕನ್ನಡ ಮನಸ್ಸುಗಳು ಮತ್ತು ಅಮೃತಹಸ್ತ  ಸಂಘಟನೆಯ ಜಗದೀಶ್, ಎಂಎಬಿಎಲ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ.ನಿರ್ಮಲ,  ಸ್ವಾಮಿವಿವೇಕಾನಂದ ಶಾಲೆಯ ಮುಖ್ಯಶಿಕ್ಷಕರುಗಳಾದ ವೆಂಕಟಲಕ್ಷ್ಮಮ್ಮ,  ಗ್ರಾಯಿತ್ರಿದೇವಿ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕೋಶಾಧ್ಯಕ್ಷ ಜಿ.ಸುರೇಶ್,  ಪ್ರತಿನಿಧಿ  ಷಫೀರ್,  ತೂಬಗೆರೆ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಉದಯ ಆರಾಧ್ಯ, ಪುಟ್ಟಸಿದ್ದಪ್ಪ ಎಂಎಬಿಎಲ್ ಮತ್ತು ಸ್ವಾಮಿವಿವೇಕಾನಂದ ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!