ಚಿಕ್ಕಬಳ್ಳಾಪುರ, (ಆ.21): ಚಿಂತಾಮಣಿ ತಾಲ್ಲೂಕಿನ ಅಂಬಾಜಿ ದುರ್ಗಾ ಹೋಬಳಿ ವ್ಯಾಪ್ತಿಯ ಮಹಮ್ಮದ್ ಪುರ ಗ್ರಾಮದಲ್ಲಿ ನಾಯಿಗಳ ದಾಳಿಗೆ ಕುರಿಗಳು ನಿರಂತರವಾಗಿ ಬಲಿಯಾಗುತ್ತಿವುದರಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ.
ಶನಿವಾರ ರಾತ್ರಿ ಮಹಮ್ಮದ್ ಪುರ ಗ್ರಾಮದ ನಾರಾಯಣಮ್ಮ ವೆಂಕಟಪ್ಪ ಎಂಬುವರಿಗೆ ಸೇರಿದ ಕುರಿ ಕೊಟ್ಟಿಗೆ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 15 ಕುರಿಗಳು ಬಲಿಯಾಗಿವೆ.
ರಾತ್ರಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ಕೊಟ್ಟಿಗೆಗೆ ನುಗ್ಗಿ ಕುರಿಗಳನ್ನು ಕಚ್ಚಿ ಸಾಯಿಸಿವೆ. ಸುಮಾರು ೨ಲಕ್ಷ ಮೌಲ್ಯದ ಕುರಿಗಳು ಮೃತಪಟ್ಟಿವೆ ಎಂದು ನಾರಾಯಣಮ್ಮ ತಿಳಿಸಿದ್ದಾರೆ.
ಭಾನುವಾರ ಘಟನಾ ಸ್ಥಳಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಽಕಾರಿ ಆನಂದ್, ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾರಾಯಣಸ್ವಾಮಿ,ಪಶುವೈದ್ಯ ಆಸ್ಪತ್ರೆಯ ಡಾ.ಚಲಪತಿ ಬೇಟಿ ನೀಡಿ ಕುರಿಗಳ ಶವ ಪರೀಕ್ಷೆ ನಡೆಸಿ, ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದರು.
ಇತ್ತೀಚಿಗೆ ಗ್ರಾಮದಲ್ಲಿ ಬೀದಿನಾಯಿ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ರಾತ್ರಿ ಸಮಯದಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ.
ಹಸು,ಕುರಿ ಮೇಕೆಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿದ್ದು ನಾಯಿಗಳನ್ನು ಗ್ರಾಮ ಪಂಚಾಯಿತಿಯವರು ಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….