ದೊಡ್ಡಬಳ್ಳಾಪುರ, (ಆ.23): ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ, ತಾಯಿ ಮತ್ತು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ ದರ್ಗಾಜೋಗಹಳ್ಳಿ ನಿವಾಸಿಗಳಾದ ತಾತೂನ್ ಬಿ (55 ವರ್ಷ), ಜಮೀರ್ ಖಾನ್ (38ವರ್ಷ) ತಲೆಗೆ ತೀವ್ರ ಪೆಟ್ಟಾಗಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ.
ತಾಯಿ ಮತ್ತು ಮಗ ದ್ವಿಚಕ್ರ ವಾಹನದಲ್ಲಿ ದೊಡ್ಡಬಳ್ಳಾಪುರದಿಂದ ದೊಡ್ಡಬೆಳವಂಗಲ ತೆರಳುವ ವೇಳೆ ಕಾರಿಗೆ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಘಟನೆ ನಡೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….