ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಆ, 23): ನಾಡಿನ  ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. 

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು. 

ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು . ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು. 

ಕುಂ.ವೀರಭದ್ರಪ್ಪ, ಡಾ:ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ  ಅತಿ ಹೆಚ್ಚು ಬೆದರಿಕೆಗಳು ಬಂದಿವೆ.  ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ,  ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿ ಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು.

ಸಾರ್ವಜನಿಕ ಪ್ರತಿಭಟನೆಗಳನ್ನು  ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು. 

ಈವರೆಗೆ ಸುಮಾರು 15 ಪತ್ರಗಳು ಬಂದಿವೆ. ಈ ಸರ್ಕಾರ ಬಂದ ನಂತರ ಮೂರು ಪತ್ರಗಳು ಬಂದಿವೆ. ಒಂದೇ ರೀತಿಯ ಒಕ್ಕಣೆ ಇರುವ ಪತ್ರಗಳು ಬಂದಿವೆ ಎಂದು ಸಾಹಿತಿ ಡಾ:ವಸುಂಧರಾ ಭೂಪತಿ  ತಿಳಿಸಿದರು. 

ರಾಜ್ಯ ಶಿಕ್ಷಣ ನೀತಿ: ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆ ಯನ್ನು ಜಾರಿಗೆ ತರಲು  ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು  ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶ ಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.  

ಸೌಜನ್ಯ ಪ್ರಕರಣ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಸಾಹಿತಿಗಳು ಒತ್ತಾಯಿಸಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ಮರುತನಿಖೆ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ  ಈ ಬಗ್ಗೆ ಪತ್ರ ಬರೆಯಬಹುದು. ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅವರ ಪೋಷಕರು ಮೇಲ್ಮನವಿ ಸಲ್ಲಿಸಬೇಕು ಎಂದು ವಿವರಿಸಿದರು.

ಹಿರಿಯ ಸಾಹಿತಿಗಳಾದ ಡಾ: ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ: ವಸುಂಧರಾ ಭೂಪತಿ, ಡಾ:ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ರುದ್ರಪ್ಪ ಹನಗವಾಡಿ, ಎಲ್.ಎನ್.ಮುಕುಂದರಾಜ್ ಸೇರಿ ಹಲವು ಲೇಖಕರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]