100 ದಿನಗಳಲ್ಲಿ ಎತ್ತಿನಹೊಳೆ ನೀರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಸಕಲೇಶಪುರ, (ಆ.23): “ಮುಂದಿನ 100 ದಿನಗಳ ಒಳಗಾಗಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ ನೀರು ಪಂಪ್ ಮಾಡಿ ಹರಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿಕೆ. ಶಿವಕುಮಾರ್ ತಿಳಿಸಿದ್ದಾರೆ.

“ಪಶ್ಚಿಮ ಘಟ್ಟದಲ್ಲಿ ಹರಿಯುವ ನೀರಲ್ಲಿ ಕೋಲಾರದವರೆಗೆ ಒಟ್ಟು 24 ಟಿಎಂಸಿ ಹರಿಸುವುದು ಎತ್ತಿನಹೊಳೆ ಯೋಜನೆಯ ಉದ್ದೇಶ. ಈ ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗಲೂ ನಾನು ಇಲ್ಲಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದೆ ಕೆಲಸ ಆಗ ಎಲ್ಲಿತ್ತೋ ಈಗಲೂ ಅಲ್ಲೇ ಇದೆ. 

ಈ ಯೋಜನೆ ವೆಚ್ಚ ಸದ್ಯಕ್ಕೆ 24 ಸಾವಿರ ಕೋಟಿ ರೂ.ಗೆ ಏರಿಕೆ ಆಗಿದ್ದು ಈ ಯೋಜನೆ ಪ್ರಗತಿ ಬಗ್ಗೆ ನನಗೆ ಸಮಾಧಾನ ಇಲ್ಲ ಹೀಗಾಗಿ ನಾನೇ ಖುದ್ದಾಗಿ ಬಂದು ಪರಿಶೀಲನೆ ಮಾಡಿದ್ದೇನೆ. ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಅಧಿಕಾರಿಗಳು ಅವರದೇ ಆದ ಕಾನೂನು ಬಳಸುತ್ತಿರುವುದರಿಂದ ಯೋಜನೆಗೆ ತೊಡಕಾಗಿದೆ ಎಂಬ ದೂರುಗಳು ಬಂದಿವೆ’ ಎಂದು ಅವರು ಹೇಳಿದ್ದಾರೆ.

ಈ ಯೋಜನೆಗೆ ಎದುರಾಗಿರುವ ಸಮಸ್ಯೆಗಳಿಗೆ ಒಂದೊಂದಾಗಿ ಪರಿಹಾರ ನೀಡಲಾಗಿದೆ. ವಿದ್ಯುತ್ ಇಲಾಖೆ ಸಮಸ್ಯೆ ಅರಣ್ಯ ಇಲಾಖೆ ಸಮಸ್ಯೆ ಭೂ ಮಾಲೀಕರ ಸಮಸ್ಯೆ ಸೇರಿದಂತೆ ಎಲ್ಲದ್ದಕ್ಕೂ ಪರಿಹಾರ ಸೂಚಿಸಲಾಗಿದೆ. 

ಈ ಯೋಜನೆ ಪೂರ್ಣಗೊಳಿಸಲು ಅಗತ್ಯ ಲೋಡ್ ಶೆಡ್ಡಿಂಗ್ ಗೆ ಸೂಚನೆ ನೀಡಲಾಗಿದೆ. ಅರಣ್ಯ ಪ್ರದೇಶ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಒಪ್ಪಿದ್ದಾರೆ. ಕಂದಾಯ ಭೂಮಿ ಸ್ವಾಧೀನ ಸಮಸ್ಯೆ ನಿವಾರಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲರ ಆಶ್ವಾಸನೆ ಮೇರೆಗೆ 100 ದಿನಗಳಲ್ಲಿ ಮೊದಲ ಹಂತದ ಯೋಜನೆಯ ನೀರನ್ನು ಪಂಪ್ ಮಾಡಲು ಕಾಲ ಮಿತಿ ನಿಗದಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!