ಕೇವಲ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಜನರಿಗೆ ಏನೂ ಲಾಭ ಇಲ್ಲ: ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಆ 25): ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. 

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ ಎಂದರು. 

ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು. 

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. 

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು. 

ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಅವರು ಜನಚಳವಳಿಗಳ ಉತ್ಪತ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಚಳವಳಿಗಳ ಉತ್ಪತ್ತಿ. ಇಚರು ಬಜೆಟ್ ನಲ್ಲಿ ಕೊಟ್ಟಿರುವ ಕಾರ್ಯಕ್ರಮಗಳು, ದಲಿತರ ಪರವಾದ ಕಾಯ್ದೆ ಮತ್ತು ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿರುವುದೇ ಅವರು ಸಂವಿಧಾನದ ನಿಜವಾದ ರಕ್ಷಕರು ಮತ್ತು ಪಾಲಕರು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಬಣ್ಣಿಸಿದರು.  

ಕುವೆಂಪು ಕನಸಿನ ಕಲ್ಕಿ ರಾಮಯ್ಯ: ಕುವೆಂಪು ಅವರು 40 ರ ದಶಕದಲ್ಲಿ ದಲಿತ-ಬಡವರ ಏಳಿಗೆಗೆ ಕಲ್ಕಿಯ ಉದಯ ಆಗಬೇಕು ಎನ್ನುವ ಆಶಯದ ಕವನ ಬರೆದಿದ್ದರು. 1948 ರಲ್ಲಿ ಕುವೆಂಪು ಕನಸಿನ ಕಲ್ಕಿ ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಜನಿಸಿದರು. ಅವರೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕಾರ್ಯಕ್ರಮದ ನಿರೂಪಕ ಲಕ್ಷ್ಮೀನಾರಾಯಣ್ ಅವರು ಬಣ್ಣಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!