ಬೆಂಗಳೂರು, (ಆ.25): ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ, ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777 ಚಿತ್ರಕ್ಕೆ ದೊರೆತಿದೆ.
ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿ, ಎಕ್ಸ್ (ಈ ಮುಂಚೆ ಟ್ವೀಟ್ ಎನ್ನಲಾಗುತ್ತಿತ್ತು) ಮಾಡಿರುವ ಅವರು, 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿರುವುದು ಕನ್ನಡಿಗರ ಹೆಮ್ಮೆಯನ್ನು ಹೆಚ್ಚಿಸಿದೆ.
ಅತ್ಯುತ್ತಮ ಕನ್ನಡ ಸಿನಿಮಾ ಪಶಸ್ತಿ ಪಡೆದ ‘ಚಾರ್ಲಿ 777’ ಚಿತ್ರ ತಂಡಕ್ಕೆ, ನಾನ್ ಫೀಚರ್ ವಿಭಾಗದ ಅತ್ಯುತ್ತಮ ಅನ್ವೇಷಣೆ ಸಿನಿಮಾ ಪ್ರಶಸ್ತಿ ಪಡೆದ ‘ಆಯುಷ್ಮಾನ್’ ಚಿತ್ರ ತಂಡಕ್ಕೆ, ತೀರ್ಪುಗಾರರ ವಿಶೇಷ ಮೆಚ್ಚುಗೆ ಪಡೆದ ನಾನ್ ಫೀಚರ್ ವಿಭಾಗದ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಅನಿರುದ್ಧ್ ಜಟ್ಕರ್ ನಿರ್ದೇಶನದ ‘ಬಾಳೆ ಬಂಗಾರ’ ಚಿತ್ರ ತಂಡಕ್ಕೆ ಹಾಗೂ ಅತ್ಯುತ್ತಮ ಸಿನೆಮಾ ವಿಮರ್ಶಕ ಪ್ರಶಸ್ತಿ ಪಡೆದ ( ಸ್ಪೆಷಲ್ ಮೆನ್ಷನ್ – ಕ್ರಿಟಿಕ್) ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಮಣ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಾ, ಕನ್ನಡದಲ್ಲಿ ಇನ್ನಷ್ಟು ಅತ್ಯುತ್ತಮ ಸಿನಿಮಾಗಳು ಮೂಡಿಬರಲಿ ಎಂದು ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ ಪ್ರಶಸ್ತಿ ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….